ಕರ್ನಾಟಕ

ಮೊಮ್ಮಗು ವಯಸ್ಸಿನ ಬಾಲೆಯ ಮೇಲೆ ಅತ್ಯಾಚಾರ

Pinterest LinkedIn Tumblr

rapeಗದಗ: ತನ್ನ ಮೊಮ್ಮಗು ವಯಸ್ಸಿನ ಪುಟ್ಟ ಬಾಲಕಿಯ  ಮೇಲೆ ವಯೋವೃದ್ಧನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಗದಗ ತಾಲ್ಲೂಕಿನ ಮುಳಗುಂದ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳೀಯರು ಆತನನ್ನು ಹಿಡಿದು ಧರ್ಮದೇಟು ನೀಡಿದ್ದಾರೆ. ನಿನ್ನೆ ಮಧ್ಯಾಹ್ನದ ಸುಮಾರಿಗೆ ಈ ಘಟನೆ ನಡೆದಿದ್ದು, ತಿಂಡಿ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಕೊಂಡೊಯ್ದ 65ರ ವೃದ್ಧ ಹನುಮಪ್ಪ ವಡ್ಡರ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಕೃತ್ಯವನ್ನು ಎಸಗಿದ್ದಾನೆ.

ಪೋಸ್ಕೋ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಸ್ವಸ್ಥ ಬಾಲಕಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Write A Comment