ಕರ್ನಾಟಕ

ಕಳಸಾ ಬಂಡೂರಿ ಹೋರಾಟ ನಿರ್ಲಕ್ಷ್ಯ : ಧಾರವಾಡದಲ್ಲಿ ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಿ ಪ್ರತಿಭಟನೆ

Pinterest LinkedIn Tumblr

kalasaಧಾರವಾಡ, ನ.11- ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ 101 ದಿನಗಳಿಂದ ರೈತರು, ವಿವಿಧ ಸಂಘಟನೆಗಳ ಮುಖಂಡರುಗಳು ಹೋರಾಟ ನಡೆಸುತ್ತಾ ಬಂದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸಿರುವುದನ್ನು ಪ್ರತಿಭಟಿಸಿ, ನಗರದಲ್ಲಿಂದು ಪಕ್ಷಾತೀತ ಹೋರಾಟ ಸಮಿತಿಯವರು ಜಿಲ್ಲೆಯ ನವಲಗುಂದ ನಗರದಲ್ಲಿ ಪ್ರತ್ಯೇಕ ಧ್ವಜಾರೋಹಣ ನಡೆಸಿದರು. ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮಸ್ಯೆ ನಿವಾರಣೆಗೆ ಮುಂದಾಗದಿದ್ದರೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಉಗ್ರ ಹೋರಾಟ ಮಾಡಲಾಗುವುದು, ಈ ಸಂದರ್ಭದಲ್ಲಿ ಏನಾದರೂ ಅನಾಹುತಗಳು ಸಂಭವಿಸಿದರೆ ಅದಕ್ಕೆ ಸರ್ಕಾರಗಳೇ ಹೊಣೆಯಾಗಬೇಕಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದರು.

ಹೋರಾಟಗಾರರಾದ ಲೋಕನಾಥ್ ಹೆಬಸೂರು, ಚಂದ್ರಗೌಡ ಪಾಟೀಲ್, ಸಂಗಪ್ಪ ನಿಡವಣಿ ಹಾಗೂ ರೈತ ಮುಖಂಡರು ಭಾಗವಹಿಸಿದ್ದರು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಈ ಕಾರ್ಯಕ್ರಮದಿಂದ ದೂರ ಉಳಿದಿದ್ದವು.

Write A Comment