ಕರ್ನಾಟಕ

ಕಬ್ಬನ್‌ ಪಾರ್ಕ್‌ನಲ್ಲಿ ಮಹಿಳೆಯೊಬ್ಬರ ಮೇಲೆ ನಾಲ್ಕು ಮಂದಿ ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

Pinterest LinkedIn Tumblr

7050gang_rape

ಬೆಂಗಳೂರು: ರಾಜ್ಯ ರಾಜಧಾನಿಯ ಹೃದಯ ಭಾಗ ಕಬ್ಬನ್‌ ಪಾರ್ಕ್‌ನಲ್ಲಿ ಬುಧವಾರ ರಾತ್ರಿ ಮಹಿಳೆಯೊಬ್ಬರ ಮೇಲೆ ನಾಲ್ಕು ಮಂದಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಪ್ರಕರಣ ಸಂಬಂಧ ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಬ್ಬನ್‌ ಪಾರ್ಕ್‌ ಒಳಭಾಗದಲ್ಲಿರುವ ಟೆನಿಸ್‌ ಕ್ರೀಡಾಂಗಣದ ಬಳಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ದುಷ್ಕರ್ಮಿಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

‘ಬುಧವಾರ ರಾತ್ರಿ ಕಬ್ಬನ್‌ ಪಾರ್ಕ್ ಠಾಣೆಯ ಎಎಸ್‌ಐ ಗಸ್ತಿನಲ್ಲಿದ್ದರು. ಸಿದ್ದಲಿಂಗಯ್ಯ ವೃತ್ತದ ಬಳಿ ರಸ್ತೆ ಬದಿಯಲ್ಲಿ ಮಹಿಳೆಯೊಬ್ಬರು ಕುಳಿತಿರುವುದನ್ನು ಎಎಸ್‌ಐ ಗಮನಿಸಿದ್ದಾರೆ. ಅವರ ಬಳಿ ಹೋಗಿ ವಿಚಾರಿಸಿದಾಗ ಸಾಮೂಹಿಕ ಅತ್ಯಾಚಾರ ನಡೆದಿರುವ ವಿಷಯ ಗೊತ್ತಾಗಿದೆ’ ಎಂದು ಕೇಂದ್ರ ವಿಭಾಗದ ಡಿಸಿಪಿ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

Write A Comment