ಕರ್ನಾಟಕ

ಕೋಮು ಘರ್ಷಣೆಗೆ ಟಿಪ್ಪು ಜಯಂತಿ ಕಾರಣ: ಎಚ್ ಡಿಕೆ

Pinterest LinkedIn Tumblr

HDK-NEWಬೆಂಗಳೂರು: ಕೆಲವೇ ಕೆಲವು ಮಹಾತ್ಮರ ಜಯಂತಿ ಮಾತ್ರ ಆಚರಣೆ ಮಾಡಬೇಕು, ಉಳಿದವರ ಜಯಂತಿಗಳನ್ನು ರದ್ದುಗೊಳಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯಿಂದ ರಾಜ್ಯದಲ್ಲಿ ಕೋಮು ಘರ್ಷಣೆ ಉಂಟಾಗಿದೆ. ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಿಸಿರುವುದೇ ಮೂಲ ಕಾರಣವಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಂಡು ಜನತೆಯ ಜೀವನವನ್ನು ಅಸ್ತವ್ಯಸ್ಥಗೊಳಿಸುವ ಪ್ರತಿಭಟನೆಗಳಲ್ಲಿ ತೊಡಗಿವೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಏಕಾಂಗಿಯಾಗಿ ಹೋರಾಟ ಮಾಡಲಿದೆ. ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡುವ ಸಾಧ್ಯತೆಗಳಿಲ್ಲ ಎಂದು ತಿಳಿಸಿದ್ದಾರೆ

Write A Comment