ಕರ್ನಾಟಕ

ಕಬ್ಬನ್‌ಪಾರ್ಕ್ ಅತ್ಯಾಚಾರ ಪ್ರಕರಣ ಆರೋಪಿಗಳಿಗೆ ನ್ಯಾಯಾಂಗ ಬಂಧನ

Pinterest LinkedIn Tumblr

jail-generic_650x400_61426190318

ಬೆಂಗಳೂರು: ಕಬ್ಬನ್‌ಪಾರ್ಕ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಎಂಟನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಈ ಸಂಬಂಧ ಉದ್ಯಾನದ ಕಾವಲುಗಾರರಾದ ರಾಜು ಮೇಟಿ ಹಾಗೂ ಬೋಲಿನ್ ದಾಸ್‌ನನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಲಯದ ಅನುಮತಿ ಪಡೆದು ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಗುರುವಾರವೇ ತಮ್ಮ ವಶಕ್ಕೆ ಪಡೆದಿದ್ದ ಪೊಲೀಸರು, ರಾತ್ರಿಯಿಡೀ ವಿಚಾರಣೆ ನಡೆಸಿ ಅವಶ್ಯ ಮಾಹಿತಿ ಪಡೆದುಕೊಂಡರು.

‘ಬಂಧಿತರು ತಪ್ಪು ಒಪ್ಪಿಕೊಂಡಿದ್ದು, ಈ ಹಿಂದೆ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ. ವಿಚಾರಣೆ ಮುಗಿದಿದ್ದರಿಂದ ಶುಕ್ರವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನ.27ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು’ ಎಂದು ಅಧಿಕಾರಿಗಳು ಹೇಳಿದರು.

ಬುದ್ಧಿಮಾಂದ್ಯರಲ್ಲ: ‘ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಜತೆಗೆ ಮನೋವೈದ್ಯರ ಮೂಲಕ ಸಮಾಲೋಚನೆ ಸಹ ಮಾಡಿಸಲಾಗಿದೆ. ಕೌಟುಂಬಿಕ ಕಲಹಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ಆದರೆ ಅವರು ಬುದ್ಧಿಮಾಂದ್ಯರಲ್ಲ’ ಎಂದು ಮಾಹಿತಿ ನೀಡಿದರು.

ಅತ್ಯಾಚಾರ ತಡೆ ಸಮಿತಿ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಶುಕ್ರವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ನಂತರ ಕಬ್ಬನ್‌ ಪಾರ್ಕ್‌ ಠಾಣೆಗೆ ತೆರಳಿ ಪ್ರಕರಣದ ಬಗ್ಗೆ ಮಾಹಿತಿ ಪಡೆದರು. ಟೆನಿಸ್ ತರಬೇತಿ ಬಗ್ಗೆ ವಿಚಾರಿಸಲು ನ.11ರಂದು ರಾಜ್ಯ ಲಾನ್ ಟೆನಿಸ್ ಸಂಸ್ಥೆಗೆ ಬಂದಿದ್ದ ಮಹಿಳೆ ಮೇಲೆ ಆರೋಪಿಗಳು ಅತ್ಯಾಚಾರ ಎಸಗಿದ್ದರು.

Write A Comment