ಕರ್ನಾಟಕ

ಹಿಂಸೆಗೆ ಪ್ರಚೋದನೆ ನೀಡುತ್ತಿರುವ ಬಿಜೆಪಿ: ರಾಜಶೇಖರನ್

Pinterest LinkedIn Tumblr

rajasekhar-fiಬೆಂಗಳೂರು, ನ.14: ಬಿಜೆಪಿ ನಾಯಕರು ದೇಶದಲ್ಲಿ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ.ವಿ.ರಾಜಶೇಖರನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಕ್ಕೆ ಹೊಸ ಆಯಾಮ ಕೊಟ್ಟವರು ಜವಾಹರ್‌ಲಾಲ್ ನೆಹರೂ. ಭಾರತವು ಇಂದು ಜಾತ್ಯತೀತ ತತ್ವಗಳ ಆಧಾರದ ಮೇಲೆ ವಿಶ್ವದಲ್ಲಿ ಒಂದು ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ನೆಹರೂ ಕೊಡುಗೆ ಅನನ್ಯ ಎಂದು ಅವರು ಹೇಳಿದರು.ನೆಹರೂ ಜೀವನದ ಹಾದಿಯಲ್ಲಿ ನಾವು ಸಾಗಬೇಕಿದೆ. ದೇಶದ ಭವಿಷ್ಯವಾಗಿರುವ ಯುವ ಸಮೂಹಕ್ಕೆ ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡುವ ಮೂಲಕ ಅವರನ್ನು ಮುಂದೆ ತರಲು ನಾವು ಶ್ರಮಿಸಬೇಕು ಎಂದು ರಾಜಶೇಖರನ್ ಕರೆ ನೀಡಿದರು.

ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ಮಾತನಾಡಿ, ಬ್ರಿಟನ್ ಸಂಸತ್ತಿನಲ್ಲಿ ಜವಾಹರ್‌ಲಾಲ್ ನೆಹರೂ ಅವರ ಹೆಸರನ್ನು ಪ್ರಸ್ತಾಪಿಸುವ ಪ್ರಧಾನಿ ನರೇಂದ್ರಮೋದಿ, ಭಾರತದ ನೆಲದಲ್ಲಿ ಅವರನ್ನು ಸ್ಮರಿಸಿಕೊಳ್ಳುವುದಿಲ್ಲ ಎಂದು ಟೀಕಿಸಿದರು.

ದೇಶದ ಅಭಿವೃದ್ಧಿಗೆ ಬುನಾದಿ ಹಾಕಿದ್ದು ನೆಹರೂ. ಕಾಂಗ್ರೆಸಿಗರಿಗಿಂತ ಹೆಚ್ಚಾಗಿ ಬಿಜೆಪಿಯವರು ನೆಹರೂ ಬಗ್ಗೆ ಗಮನಹರಿಸುತ್ತಿದ್ದಾರೆ. ಸಮಸ್ಯೆಗಳ ಬಗ್ಗೆ ವಾಸ್ತವ ನೆಲೆಗಟ್ಟಿನಲ್ಲಿ ಚರ್ಚೆ ನಡೆಸಲು ಬಿಜೆಪಿ ಮುಖಂಡರು ಮುಂದೆ ಬರಲಿ ಎಂದು ಅವರು ಆಗ್ರಹಿಸಿದರು.

Write A Comment