ಕರ್ನಾಟಕ

ನ.17ರಂದು ವಿಧಾನಸಭೆಗೆ ಮುತ್ತಿಗೆ : ಕೆ.ಎಸ್.ಈಶ್ವರಪ್ಪ

Pinterest LinkedIn Tumblr

Eshwarappa

ಶಿವಮೊಗ್ಗ, ನ.15: ಕರ್ನಾಟಕದಲ್ಲಿ ಜಾತಿ ಜಾತಿಗಳ ನಡುವೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿರುವ ಮೊದಲನೆ ಸರ್ಕಾರ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿರುವ ಮೇಲ್ಮನೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಈ ಬಗ್ಗೆ ಅಧಿವೇಶನದಲ್ಲಿ ವಿಸ್ತೃತ ಚರ್ಚೆ ನಡೆಸುತ್ತೇವೆ. ನ.17ರಂದು ವಿಧಾನಸಭೆಗೆ ಮುತ್ತಿಗೆ ಹಾಕುತ್ತೇವೆ ಎಂದು ಗುಡುಗಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನರನ್ನು ಜಾತಿ ಆಧಾರದ ಮೇಲೆ ಎತ್ತಿ ಕಟ್ಟುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಹಿಂದೂಗಳನ್ನು, ಮುಸಲ್ಮಾನರನ್ನು ಒಕ್ಕಲೆಬ್ಬಿಸಿ ಒಡೆದು ಛಿದ್ರ ಮಾಡುವುದೇ ಕಾಂಗ್ರೆಸ್‌ನ ಕಾಯಕವಾಗಿದೆ. ಈಗ ಹಿಂದುಳಿದವರು, ದಲಿತರು ಇವರ ಪರವಾಗಿ ನಾವಿದ್ದೇವೆ ಎಂದು ಹೇಳಿ ಎಲ್ಲ ವರ್ಗದವರಿಗೆ ವಿರೋಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೊಪಿಸಿದರು.

ರಾಜ್ಯದಲ್ಲಿ ದರೋಡೆ, ಸುಲಿಗೆ, ಅತ್ಯಾಚಾರ, ಕೊಲೆ ನಡೆಯುತ್ತಿರುವ ಸಂದರ್ಭದಲ್ಲಿ ವಿಪಕ್ಷದವರಾದ ನಾವು ಕೈ ಕಟ್ಟಿ ಕೂರಲು ಸಾಧ್ಯವಿಲ್ಲ. ನಾಳೆಯಿಂದ ಪ್ರಾರಂಭವಾಗಲಿರುವ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇವೆ ಹಾಗೂ 17ರಂದು ವಿಧಾನಸಭೆಗೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.

Write A Comment