ಕರ್ನಾಟಕ

62ನೆ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ; ರೈತರನ್ನು ವಂಚಿಸುವ ಸಂಘ-ಸಂಸ್ಥೆಗಳ ವಿರುದ್ಧ ಕ್ರಮ: ಪರಮೇಶ್ವರ್

Pinterest LinkedIn Tumblr

tigalaಬೆಂಗಳೂರು, ನ. 15: ರೈತರಿಗೆ ವಂಚಿಸುವ ಸಹಕಾರ ಕ್ಷೇತ್ರದ ಸಂಘ-ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ರವಿವಾರ ಕರ್ನಾಟಕ ರಾಜ್ಯ ಸಹಕಾರಿ ವಸತಿ ಮಹಾಮಂಡಳ ಆಯೋಜಿಸಿದ್ದ, 62ನೆ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಗೃಹ ಸಚಿವರು, ರೈತರು ಕಷ್ಟಪಟ್ಟು ದುಡಿದ ಹಣವನ್ನು ಸಹಕಾರಿ ಬ್ಯಾಂಕ್‌ಗಳಲ್ಲಿ ಪಾವತಿ ಮಾಡಿರುತ್ತಾರೆ. ಆದರೆ, ಇಂದು ಕೆಲವು ಸಹಕಾರಿ ಸಂಘ ಸಂಸ್ಥೆಗಳು ಅವರಿಗೆ ವಂಚನೆ ಮಾಡುತ್ತಿದ್ದು, ಕಾನೂನು ಉಲ್ಲಂಘಿಸಿದ ಸಂಘ-ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿದರು.
ಬೆಳೆಯುತ್ತಿರುವ ಕ್ಷೇತ್ರಗಳಲ್ಲಿ ಸಹಕಾರ ಕ್ಷೇತ್ರ ಪ್ರಮುಖ ಪಾತ್ರ ವಹಿಸುತ್ತಿದೆ. ದೇಶ ಆರ್ಥಿಕವಾಗಿ ಪ್ರಗತಿ ಹೊಂದಲು ಸಹ ಸಾಧ್ಯವಾಗಿದೆ. ಸಹಕಾರಿ ಸಂಘಗಳಿಂದ ಬರುವ ಲಾಭವನ್ನು ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ವಿನಿಯೋಗಿಸಲು ಸಲಹೆ ನೀಡಿದರು.
2020ರ ವೇಳೆಗೆ ದೇಶ ಆರ್ಥಿಕವಾಗಿ ಸದೃಢ ರಾಷ್ಟ್ರವಾಗಲಿದೆ ಎಂಬ ಆರ್ಥಿಕ ತಜ್ಞರ ಅಭಿಪ್ರಾಯಕ್ಕೆ ರೈತರು ಹಾಗೂ ಸಹಕಾರ ಸಂಘಗಳ ಪರಿಶ್ರಮವೇ ಕಾರಣ ಎಂದ ಅವರು, ಎಸ್.ಟಿ. ಸೋಮಶೇಖರ್ ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಲ ನಿಗಮದ ಅಧ್ಯಕ್ಷತೆ ವಹಿಸಿಕೊಂಡ ಮೇಲೆ 600 ಕೋಟಿಗೂ ಅಧಿಕ ಶೇರು ಸಂಗ್ರಹವಾಗಿದೆ ಎಂಬ ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳ ನಿಗಮ ಮಂಡಳಿ ಅಧ್ಯಕ್ಷ ಎಸ್.ಟಿ. ಸೋಮಶೇಖರ್ ಮಾತನಾಡಿ, ರೈತರು ಆರ್ಥಿಕವಾಗಿ ಸದೃಢರಾಗಲು ಸಹಕಾರ ಕ್ಷೇತ್ರ ಮುಖ್ಯ. ಇದರಿಂದಾಗಿ ಎಲ್ಲ ಸಂಘ-ಸಂಸ್ಥೆಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಗಮದ ಅಧ್ಯಕ್ಷ ಶೇಖರಗೌಡ ಮಾಲಿ ಪಾಟೀಲ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ವಿ.ರವಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Write A Comment