ಕರ್ನಾಟಕ

ಅನಾರೋಗ್ಯದಿಂದ ಬಳಲುತ್ತಿದ್ದ ಹೆಡ್‌ಕಾನ್ಸ್‌ಟೆಬಲ್ ಆತ್ಮಹತ್ಯೆ

Pinterest LinkedIn Tumblr

policeಬೆಂಗಳೂರು, ನ.16- ಅನಾರೋಗ್ಯದಿಂದ ಬಳಲುತ್ತಿದ್ದ ಹೆಡ್‌ಕಾನ್ಸ್‌ಟೆಬಲ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೃಂದಾವನ ನಗರ ವಾಸಿ ಬಿ.ಆರ್.ಪ್ರಕಾಶ್ (42) ಆತ್ಮಹತ್ಯೆ ಮಾಡಿಕೊಂಡ ಹೆಡ್‌ಕಾನ್ಸ್‌ಟೆಬಲ್. ಕೆಆರ್ ಮಾರ್ಕೆಟ್ ಠಾಣೆಯ ಹೆಡ್‌ಕಾನ್ಸ್‌ಟೆಬಲ್ ಆಗಿದ್ದ ಇವರು  ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಮನೆಯಲ್ಲಿ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment