ಕರ್ನಾಟಕ

ಮೌಢ್ಯ ನಿಷೇಧ ಕಾಯ್ದೆಗೆ ಮರುಜೀವ : ಈ ವಿಷಯವಾಗಿ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದ ಸಚಿವ ಜಯಚಂದ್ರ

Pinterest LinkedIn Tumblr

chaligaಬೆಂಗಳೂರು,ನ.16- ಮೌಢ್ಯಚಾರ ನಿಷೇಧ ಕಾಯ್ದೆಗೆ ಮತ್ತೆ ಜೀವ ಬಂದಿದ್ದು, ಸರ್ಕಾರ ಈ ವಿಷಯವಾಗಿ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಹೇಳಿದರು.  ವಿಧಾನಸಭೈ ಕಲಾಪದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೌಢ್ಯಚಾರ ನಿಷೇಧದ ಬಗ್ಗೆ ಸಾರ್ವಜನಿಕರ ಅಭಿಪ್ರಾಯಗಳನ್ನು ಸಂಗ್ರಹಿಸಿ, ನಂತರ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಸಧ್ಯಕ್ಕೆ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.

ಮೌಡ್ಯ ಕಾಯ್ದೆ ನಿಷೇಧ ಕುರಿತು ನಿಡಮಾಮಿಡಿ ಸ್ವಾಮೀಜಿ ಹೋರಾಟ ಮಾಡುತ್ತಿದ್ದು, ಅವರ ಅಭಿಪ್ರಾಯ ಮತ್ತು ಸಾವಜನಿಕರ ಅಭಿಪ್ರಾಯಗಳನ್ನು ಸಂಗ್ರಹಿಸಿದ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ ಅವರು, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸದೇ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದರು.

ಮೌಢ್ಯಚಾರ ನಿಷೇಧ ಕುರಿತು ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಿದ್ದ ವೇಳೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮೌಢ್ಯಚಾರ ನಿಷೇಧ ಸಾರ್ವಜನಿಕರಿಂದ ಪರ ಮತ್ತು ವರೋಧಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಮೌಢ್ಯ ನಿಷೇಧವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಈಗ ಮತ್ತೆ ಅದಕ್ಕೆ ಜೀವ ಬಂದಿದೆ.

Write A Comment