ಕರ್ನಾಟಕ

ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ರದ್ದು ಮಾಡಿ; ಸಭಾಪತಿಗೆ ಪತ್ರ

Pinterest LinkedIn Tumblr

bigg1ಬೆಂಗಳೂರು: ನಟ ಕಿಚ್ಚ ಸುದೀಪ್ ನಡೆಸಿಕೊಡುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋನಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತಿದ್ದು, ಇದನ್ನು ಕೂಡಲೇ ರದ್ದು ಮಾಡಬೇಕು ಎಂದು ಸರ್ಕಾರಿ ಮುಖ್ಯ ಸಚೇತಕ ಆರ್.ವಿ.ವೆಂಕಟೇಶ್ ಅವರು ಬುಧವಾರ ವಿಧಾನಪರಿಷತ್ ಸಭಾಪತಿಗೆ ಪತ್ರ ಬರೆದಿದ್ದಾರೆ.

ಬಿಗ್ ಬಾಸ್ ಸೀಸನ್ ನ 3ರಲ್ಲಿ ಸ್ಪರ್ಧಿಯಾಗಿದ್ದ ಹುಚ್ಚ ವೆಂಕಟ್ ಮತ್ತೊಬ್ಬ ಸ್ಪರ್ಧಿ ರವಿ ಮೂರೂರ್ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಮಾಧ್ಯಮಗಳು ನಿರಂತರವಾಗಿ ಪ್ರಸಾರ ಮಾಡುತ್ತಿವೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ ಮತ್ತು ಬಿಗ್ ಬಾಸ್ ಶೋನಿಂದ ಸಮಾಜಕ್ಕೆ ಯಾವ ಪ್ರಯೋಜನವೂ ಇಲ್ಲ. ಹೀಗಾಗಿ ಈ ಕಾರ್ಯಕ್ರಮವನ್ನು ರದ್ದು ಮಾಡಬೇಕು ಎಂದು ವೆಂಕಟೇಶ್ ಅವರು ಪತ್ರದ ಮೂಲಕ ಸಭಾಪತಿಯವರಿಗೆ ಮನವಿ ಮಾಡಿದ್ದಾರೆ. ಅಲ್ಲದೆ ರಿಯಾಲಿಟಿ ಶೋನಲ್ಲಿನ ಘಟನೆಗಳನ್ನೇ ಸುದ್ದಿ ವಾಹಿನಿಗಳು ದೊಡ್ಡದಾಗಿ ಬಿಂಬಿಸಿ ಪ್ರಸಾರ ಮಾಡುತ್ತಿವೆ ಎಂದು ಪತ್ರದಲ್ಲಿ ದೂರಿದ್ದಾರೆ.

ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ರಿಯಾಲಿಟಿ ಶೋಗಳನ್ನು ರದ್ದು ಮಾಡುವ ಮತ್ತು ನಿಯಂತ್ರಣ ಹೇರುವ ಕ್ರಮ ಕೈಗೊಳ್ಳಬೇಕು ಎಂದು ವೆಂಕಟೇಶ್ ಹೇಳಿದ್ದಾರೆ.

ಬಿಗ್ ಬಾಸ್ ರಿಯಾಲಿಟಿ ಕಾರ್ಯಕ್ರಮದ ಅಂಗವಾಗಿ ವಾರಾಂತ್ಯದಲ್ಲಿ ನಡೆಯುವ ‘ವಾರದ ಕಥೆ ಕಿಚ್ಚನ ಜೊತೆ’ ಸಮಯದಲ್ಲಿ ಇದ್ದಕ್ಕಿದ್ದಂತೆ ರೊಚ್ಚಿಗೆದ್ದ ಹುಚ್ಚ ವೆಂಕಟ್ ಗಾಯಕ ರವಿ ಮೂರೂರ್ ಅವರ ಕಪಾಳಕ್ಕೆ ಬಾರಿಸಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಟಿವಿ ವಾಹಿನಿಗಳಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿತ್ತು.

Write A Comment