ಕರ್ನಾಟಕ

ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಪದಚ್ಯುತಿ: ‘ಕೈ’ ಶಾಸಕರ ಬೆಂಬಲ: ಸ್ಪೀಕರ್ ಕಾಗೋಡು ಪ್ರಕಟ

Pinterest LinkedIn Tumblr

BRಬೆಂಗಳೂರು, ನ.20: ಭ್ರಷ್ಟಾಚಾರ ಆರೋಪಕ್ಕೆ ಸಿಲುಕಿರುವ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಪದಚ್ಯುತಿ ಪ್ರಕ್ರಿಯೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವೂ ಕೈಜೋಡಿಸುವ ತೀರ್ಮಾನ ಕೈಗೊಂಡಿದ್ದು, ಪದಚ್ಯುತಿ ಗೊತ್ತುವಳಿಗೆ ಕಾಂಗ್ರೆಸ್ ಶಾಸಕರು ಸಹಿ ಹಾಕುವ ನಿರ್ಧಾರವನ್ನು ಪ್ರಕಟಿಸಲಾಗಿದೆ.

ಶುಕ್ರವಾರ ವಿಧಾನಸಭೆಯಲ್ಲಿ ನ್ಯಾ.ಭಾಸ್ಕರ್ ರಾವ್ ಪದಚ್ಯುತಿ ಗೊತ್ತುವಳಿಯ ಪ್ರಸ್ತಾವವನ್ನು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮಂಡನೆಗೆ ಮುಂದಾಗುತ್ತಿದ್ದಂತೆ ಸ್ಪೀಕರ್ ಕಾಗೋಡು ತಿಮ್ಮಪ್ಪ, ಪದಚ್ಯುತಿಯ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಸದಸ್ಯರೂ ಬೆಂಬಲ ನೀಡಿ ಸಹಿ ಹಾಕುತ್ತಾರೆಂದು ಹೇಳಿದ್ದಾರೆ ಎಂದು ಸದನದಲ್ಲಿ ಪ್ರಕಟಿಸಿದರು.

ಸ್ಪೀಕರ್ ಹೇಳಿಕೆಗೆ ಹಿನ್ನೆಲೆಯಲ್ಲಿ ಎದ್ದು ನಿಂತ ವಿಪಕ್ಷ ನಾಯಕ ಶೆಟ್ಟರ್, ಸರಕಾರ ಈ ತೀರ್ಮಾನ ಕೈಗೊಂಡಿರುವುದು ಒಳ್ಳೆಯ ಬೆಳವಣಿಗೆ. ಎಲ್ಲರೂ ಒಗ್ಗಟ್ಟಿನಿಂದ ‘ಭ್ರಷ್ಟ’ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಪದಚ್ಯುತಿ ನಿರ್ಣಯ ಕೈಗೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು.

ನ್ಯಾ.ಭಾಸ್ಕರ್ ರಾವ್ ಪದಚ್ಯುತಿಯ ಸಂಬಂಧ ಸೋಮವಾರ (ನ.23) ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಒಮ್ಮತದ ತೀರ್ಮಾನ ಕೈಗೊಂಡು, ಆ ನಿರ್ಣಯವನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪನವರ ಮೂಲಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗೆ ಸಲ್ಲಿಸಲಿದ್ದಾರೆಂದು ಗೊತ್ತಾಗಿದೆ.

Write A Comment