ಕರ್ನಾಟಕ

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತೆ ಬಂಧನ

Pinterest LinkedIn Tumblr

reddyಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಮಾರು ಎರಡು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಶುಕ್ರವಾರ ಮತ್ತೆ ಬಂಧಿಸಿದ್ದಾರೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಈಗಾಗಲೇ 13 ಪ್ರಕರಣಗಳಲ್ಲಿ ಜಾಮೀನು ಪಡೆದಿರುವ ರೆಡ್ಡಿ ವಿರುದ್ಧ ಈಗ ಎಸ್‌ಐಟಿ ಮತ್ತೊಂದು ಹೊಸ ಪ್ರಕರಣ ದಾಖಲಿಸಿದ್ದು, ಆ ಪ್ರಕರಣದ ವಿಚಾರಣೆಗಾಗಿ ಇಂದು ವಶಕ್ಕೆ ಪಡೆದಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ರೆಡ್ಡಿಗೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ರೆಡ್ಡಿ ಇಂದು ಬೆಳಗ್ಗೆ ಬೆಂಗಳೂರಿನ ಎಸ್‌ಐಟಿ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದರು.

Write A Comment