ಕರ್ನಾಟಕ

ಟಿಪ್ಪು ಜಯಂತಿ ಆಚರಣೆ ಪುನರ್‌ ಪರಿಶೀಲನೆ ಇಲ್ಲ

Pinterest LinkedIn Tumblr

2tippuಹಾಸನ: ಟಿಪ್ಪು ಜಯಂತಿ ಆಚರಣೆಯನ್ನು ವಾಪಸ್‌ ತೆಗೆದುಕೊಳ್ಳಬೇಕು ಎಂಬ ಬೇಡಿಕೆ ಸರ್ಕಾರಕ್ಕೆ ಯಾರಿಂದಲೂ ಬಂದಿಲ್ಲ. ಹಾಗಾಗಿ, ಟಿಪ್ಪು ಜಯಂತಿ ಆಚರಣೆಯ ನಿರ್ಧಾರವನ್ನು ಪುನರ್‌ ಪರಿಶೀಲಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಪರಮೇಶ್ವರ್‌ ತಿಳಿಸಿದ್ದಾರೆ.

ತಾಲೂಕಿನ ಗೊರೂರಿನಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಪ್ರಚೋದನಕಾರಿ ಭಾಷಣಗಳನ್ನು ಮಾಡುವವರ ವಿರುದಟಛಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಭಾಷೆಗಳ ಬಳಕೆ, ಭಾಷಣ ಮಾಡಬಾರದು.

ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಮಡಿಕೇರಿ ಹಾಗೂ ಮಂಗಳೂರಿನಲ್ಲಿ ಗಲಭೆಗಳಾದವು. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ವರದಿ ಬಂದ ನಂತರ ತಪ್ಪಿತಸ್ಥರ
ವಿರುದಟಛಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಟಿಪ್ಪು ಜಯಂತಿ ಆಚರಣೆಯನ್ನು ವಾಪಸ್‌ ತೆಗೆದುಕೊಳ್ಳಬೇಕು ಎಂಬ ಬೇಡಿಕೆ ಸರ್ಕಾರಕ್ಕೆ ಬಂದಿಲ್ಲ. ಹಾಗಾಗಿ ಟಿಪ್ಪು ಜಯಂತಿ ಆಚರಣೆಯ ನಿರ್ಧಾರವನ್ನು ಪುನರ್‌ ಪರಿಶೀಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಲ್ಲದೆ,
ಶಂಕರಾಚಾರ್ಯರ ಜಯಂತಿ, ಕೆಂಪೇಗೌಡ ಜಯಂತಿ ಆಚರಣೆಗಳ ಬಗ್ಗೆಯೂ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಇತ್ತೀಚಿನ ದಿನಗಳಲ್ಲಿ ಪೊಲೀಸರು, ಕಂದಾಯ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಮೇಲೆ ಮರಳು ಮಾμಯಾದಿಂದ ಹಲ್ಲೆ ನಡೆಯುತ್ತಿರುವುದು ದುರದೃಷ್ಟಕರ. ರಾಜ್ಯದಲ್ಲಿ ತಲೆ ಎತ್ತುತ್ತಿರುವ ಮರಳು ಮಾμಯಾವನ್ನು ಹತ್ತಿಕ್ಕಲಾಗುವುದು ಎಂದು ಭರವಸೆ ನೀಡಿದರು. ನಂತರ, ಅಂಬೇಡ್ಕರ್‌ ಪ್ರತಿಮೆ ಅನಾವರಣ ಮಾಡಿ ಮಾತನಾಡಿದ ಅವರು, ದಲಿತರಿಗೆ ಅಧಿಕಾರ ಸಿಗುವವರೆಗೂ ಸಾಮಾಜಿಕ ನ್ಯಾಯ ಸಿಗುವುದಿಲ್ಲ.

ಐಎಎಸ್‌, ಐಪಿಎಸ್‌ನಂತಹ ಸರ್ಕಾರದ ಉನ್ನತ ಹುದ್ದೆಗಳಲ್ಲಿ ದಲಿತರು ಕೂತಾಗ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ ಎಂದರು.
-ಉದಯವಾಣಿ

Write A Comment