ಕರ್ನಾಟಕ

ಉಪ ಲೋಕಾಯುಕ್ತ ಅಡಿ ಪದಚ್ಯುತಿಗೆ ಕಾಂಗ್ರೆಸ್ ಮನವಿ

Pinterest LinkedIn Tumblr

badiಬೆಂಗಳೂರು: ಉಪ ಲೋಕಾಯುಕ್ತ ಸುಭಾಷ್‌ ಬಿ ಅಡಿ ಅವರನ್ನು ಪದಚ್ಯುತಿಗೊಳಿಸುವಂತೆ ಕಾಂಗ್ರೆಸ್ ಶಾಸಕರು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಸೋಮವಾರ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಇಂದು ಮಧ್ಯಾಹ್ನ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿ ಮಾಡಿದ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ ಹಾಗೂ ಇತರೆ ಕಾಂಗ್ರೆಸ್ ಶಾಸಕರು ಪದಚ್ಯುತಿ ನಿರ್ಣಯ ಮಂಡನೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.

ಸುಭಾಷ್‌ ಬಿ ಅಡಿ ಅವರ ಪದಚ್ಯುತಿ ಪ್ರಸ್ತಾವನೆಗೆ ಕಾಂಗ್ರೆಸ್‌ನ 78 ಶಾಸಕರು ಸಹಿ ಹಾಕಿದ್ದು, ನಿರ್ಣಯ ಮಂಡನೆಗೆ ಅವಕಾಶ ನೀಡುವಂತೆ ಸ್ಪೀಕರ್ ಮನವಿ ಸಲ್ಲಿಸಲಾಗಿದೆ. ಆದರೆ ಇದಕ್ಕೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧ ವ್ಯಕ್ತಪಡಿಸಿದ್ದು, ಸ್ಪೀಕರ್ ಅವಕಾಶ ನೀಡಲಿದ್ದಾರೆ? ಎಂಬುದು ಕುತೂಹಲ ಮೂಡಿಸಿದೆ.

ಈ ಹಿಂದೆ ಉಪ ಲೋಕಾಯುಕ್ತರಾಗಿದ್ದ ಎಸ್‌.ಬಿ.ಮಜಗೆ ಅವರು ಸುಭಾಷ್‌ ಅಡಿ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಈ ಆರೋಪಗಳ ಆಧಾರದ ಮೇಲೆ ಅವರನ್ನು ಪದಚ್ಯುತಿಗೊಳಿಸುವ ನಿರ್ಣಯವನ್ನು ಮಂಡನೆ ಮಾಡಲು ಕಾಂಗ್ರೆಸ್ ಮನವಿ ಸಲ್ಲಿಸಿದೆ.

Write A Comment