ಕರ್ನಾಟಕ

ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡರೆ ರಾಜಿನಾಮೆ: ಎಚ್‌ಡಿಕೆ

Pinterest LinkedIn Tumblr

9hdk1ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡರೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚಿಗೆ ಬಿಬಿಎಂಪಿಯಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‌ನೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್, ಇದೀಗ ವಿಧಾನ ಪರಿಷತ್ ಚುನಾವಣೆಯಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ. ಈ ಸಂಬಂಧ ನಿನ್ನೆಯಷ್ಟೇ ಜೆಡಿಎಸ್ ಶಾಸಕ ಜಮೀರ್ ಅಹಮದ್ ಖಾನ್ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರೊಂದಿಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತುಕತೆ ನಡೆಸಿದ್ದರು.

ಆದರೆ ಈ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಎಚ್‌ಡಿಕೆ, ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡರೆ ಸರ್ಕಾರದ ಸರ್ಕಾರದ ವೈಫಲ್ಯವನ್ನು ಸದನದಲ್ಲಿ ಎತ್ತಿ ತೋರಿಸಲು ಸಾಧ್ಯವಾಗದು. ಹೀಗಾಗಿ ಮೈತ್ರಿ ಬೇಡ ಎಂದಿದ್ದಾರೆ. ಅಲ್ಲದೆ ಒಂದು ವೇಳೆ ಮೈತ್ರಿ ಮಾಡಿಕೊಂಡರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡವುದಾಗಿ ಹೇಳುವ ಮೂಲಕ ಪರೋಕ್ಷವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಸಂದೇಶ ರವಾನಿಸಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರೋಧಿ ಮಹಾಮೈತ್ರಿಕೂಟದೊಂದಿಗೆ ಗುರುತಿಸಿಕೊಂಡಿರುವ ದೇವೇಗೌಡರು ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಒಲವು ಹೊಂದಿದ್ದರು.

Write A Comment