ಕರ್ನಾಟಕ

ವಿಧಾನಪರಿಷತ್ ಚುನಾವಣೆ: ಎರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟ – ಸಿದ್ದರಾಮಯ್ಯ

Pinterest LinkedIn Tumblr

Siddu__________________ಬೆಂಗಳೂರು, ನ.29: ವಿಧಾನಪರಿಷತ್‌ನ 25 ಸ್ಥಾನಗಳಿಗೆ ನಡೆ ಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೆ ರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರವಿವಾರ ನಗರದ ಆದಿಚುಂಚನಗಿರಿ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದ್ದು, ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಜೊತೆ ಚರ್ಚೆ ನಡೆಸಲಾಗುವುದು ಎಂದರು.

ಆನಂತರ, ಹೊಸದಿಲ್ಲಿಗೆ ತೆರಳಿ ಪಕ್ಷದ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ ಬಳಿಕ ಅಂತಿಮವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಆದಿಚುಂಚನಗಿರಿ ಮಠದಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಆದುದರಿಂದ ಇಂದು ಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.

Write A Comment