ಕರ್ನಾಟಕ

ಅನೈತಿಕ ಸಂಬಂಧ; ಮಹಿಳೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ

Pinterest LinkedIn Tumblr

mur

ಬಳ್ಳಾರಿ,ಡಿ.1: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ಹಳಿಕೋಟೆ ಗ್ರಾಮದ ಈರಮ್ಮ(33) ಕೊಲೆಯಾದ ಮಹಿಳೆಯಾಗಿದ್ದಾಳೆ. ಸಂಬಂಧಿ ವೀರೇಶ್(40) ಹಾಗೂ ಈರಮ್ಮ ಅನೇಕ ದಿವಸಗಳಿಂದ ಅನೈತಿಕ ಸಂಬಂಧ ಹೊಂದಿದ್ದರು. ಇತ್ತೀಚೆಗೆ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿತ್ತು. ರಾತ್ರಿ ಎಂದಿನಂತೆ ಈರಮ್ಮ ಮನೆಯಲ್ಲಿ ನಿದ್ರಿಸುತ್ತಿರುವಾಗ ವೀರೇಶ್ ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಹತ್ಯೆ ಬಳಿಕ ವೀರೇಶ್ ಪೊಲೀಸರಿಗೆ ಶರಣಾಗಿದ್ದು, ಹೆಚ್ಚು ವಿಚಾರಣೆಗೊಳಪಡಿಸಿದಾಗ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಶವವನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಕಳುಹಿಸಲಾಗಿದೆ. ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

Write A Comment