ಕರ್ನಾಟಕ

ವಿಧಾನಪರಿಷತ್ ಚುನಾವಣೆ; ಹೊಸದಿಲ್ಲಿಗೆ ತೆರಳಿದ ಸಿದ್ದರಾಮಯ್ಯ, ಪರಮೇಶ್ವರ್

Pinterest LinkedIn Tumblr

Siddu-and-Paramಬೆಂಗಳುರು, ಡಿ.1: ರಾಜ್ಯ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಂಬಂಧ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೊಸದಿಲ್ಲಿಗೆ ತೆರಳಿದ್ದಾರೆ.

ಮಂಗಳವಾರ ಸಂಜೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹೊಸದಿಲ್ಲಿಗೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬುಧವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಜೊತೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲಿದ್ದಾರೆ.

ಹೊಸದಿಲ್ಲಿಗೆ ತೆರಳುವ ಮುಂಚೆ ತಮ್ಮ ಸರಕಾರಿ ನಿವಾಸ ಕಾವೇರಿಯಲ್ಲಿ ಸೇರಿದ್ದ ವಿಧಾನಪರಿಷತ್ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಿದ್ದರಾಮಯ್ಯ ಕೆಲ ಕಾಲ ಚರ್ಚೆ ನಡೆಸಿದರು. ಅಲ್ಲದೆ, ಪಕ್ಷದ ಅಧಿಕೃತ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವವರ ಗೆಲುವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ತಿಳಿಸಿದ್ದಾರೆ.

ಸೋನಿಯಾ ಭೇಟಿ ಅಸಾಧ್ಯ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ನಿಯಮಿತ ಆರೋಗ್ಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಲಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂಪರಮೇಶ್ವರ್ ಜೊತೆಗಿನ ಭೇಟಿ ರದ್ದಾಗಿದೆ.
ಒಂದು ವಾರದ ನಂತರ ಸೋನಿಯಾಗಾಂಧಿ ಭಾರತಕ್ಕೆ ಹಿಂದಿರುಗಲಿರುವುದರಿಂದ, ಅಭ್ಯರ್ಥಿಗಳ ಪಟ್ಟಿಯನ್ನು ದಿಗ್ವಿಜಯ್‌ಸಿಂಗ್ ಹಾಗೂ ಅಹ್ಮದ್‌ಪಟೇಲ್ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ ಎಂದು ತಿಳಿದುಬಂದಿದೆ.

Write A Comment