ಕರ್ನಾಟಕ

ರೈತರಿಗೆ ಬಾಕಿ ಪಾವತಿಸಿ: ಸಕ್ಕರೆ ಕಾರ್ಖಾನೆಗಳಿಗೆ ಸರಕಾರದ ಖಡಕ್ ಸೂಚನೆ

Pinterest LinkedIn Tumblr

SC___________________ಬೆಂಗಳೂರು, ಡಿ.1: ರೈತರಿಗೆ ಕಳೆದ ಎರಡು ವರ್ಷ ಗಳಿಂದ ಬಾಕಿ ಉಳಿಸಿಕೊಂಡಿರುವ ಹಣವನ್ನು ಮೊದಲು ಪಾವತಿಸಿ, ನಂತರ ಸವಲತ್ತುಗಳನ್ನು ಕೇಳಿ ಎಂದು ಸಕ್ಕರೆ ಕಾರ್ಖಾನೆಗಳಿಗೆ ರಾಜ್ಯ ಸರಕಾರ ಖಡಕ್ ಸೂಚನೆ ನೀಡಿದೆ.
ಮಂಗಳವಾರ ವಿಧಾನಸೌಧದಲ್ಲಿ ನಡೆದ ಕಬ್ಬು ದರ ನಿಯಂತ್ರಣ ಮಂಡಳಿಯ ಸಭೆಯಲ್ಲಿ ರೈತರಿಗೆ ಬಾಕಿ ಯಾಗಿರುವ ಸುಮಾರು 1,400 ಕೋಟಿ ರೂ.ಗಳನ್ನು ಮೊದಲು ಪಾವತಿಸಿ, ಆನಂತರ ನಿಮಗೆ ಬೇಕಿರುವ ಸೌಲಭ್ಯಗಳ ಬಗ್ಗೆ ಪ್ರಸ್ತಾಪಿಸಿ ಎಂದು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳಿಗೆ ಸಹಕಾರ ಹಾಗೂ ಸಕ್ಕರೆ ಸಚಿವ ಎಚ್.ಎಸ್.ಮಹದೇವಪ್ರಸಾದ್ ಕಠಿಣ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಎಫ್‌ಆರ್‌ಪಿ ಪ್ರಕಾರ ಶೇ.9.5ರಷ್ಟು ಇಳುವರಿ ಬರುವ ಪ್ರತಿಟನ್ ಕಬ್ಬಿಗೆ 2,300 ರೂ. ಹಾಗೂ ಶೇ.12.5ರಷ್ಟು ಇಳುವರಿ ಬರುವ ಕಬ್ಬಿಗೆ 3,090 ರೂ.ನೀಡಬೇಕು ಎಂದು ನಿಗದಿಯಾಗಿದೆ. ಅಲ್ಲದೆ, ಶೇ.1ರಷ್ಟು ಇಳುವರಿ ಹೆಚ್ಚಳವಾದರೆ 245 ರೂ. ಹೆಚ್ಚುವರಿಯಾಗಿ ಪಾವತಿಸಬೇಕು ಎಂದು ನಿರ್ಧರಿಸಲಾಗಿದೆ. ಇದರಿಂದಾಗಿ, ಕಬ್ಬು ಬೆಳೆಗಾರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿ ದರು. ಕಬ್ಬು ಕಟಾವು ಹಾಗೂ ಸಾಗಣೆ ವೆಚ್ಚ 540 ರೂ. (50 ಕಿ.ಮೀ.ವರೆಗೆ)ನೀಡಲು ಸಭೆಯಲ್ಲಿ ನಿರ್ಧ ರಿಸಲಾಗಿದೆ. ಎಫ್‌ಆರ್‌ಪಿ ವಿರುದ್ಧವಾಗಿ ಕೆಲವು ಸಕ್ಕರೆ ಕಾರ್ಖಾನೆಗಳು 1,500, 1,600, 2,000 ರೂ. ನೀಡು ವುದಾಗಿ ಜಾಹೀರಾತು ನೀಡಿವೆ ಎಂದು ಅವರು ಹೇಳಿದರು.
ಸರಕಾರದ ನಿಯಮವನ್ನು ಪಾಲಿಸಬೇಕಾದ ಸಕ್ಕರೆ ಕಾರ್ಖಾನೆಗಳು ಅದನ್ನು ಉಲ್ಲಂಘಿಸಲು ಮುಂದಾಗಿವೆ. ಆದುದರಿಂದ ಅಂತಹ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇಂದಿನ ಸಭೆಯಲ್ಲಿ ನಾವು ಒತ್ತಾಯಿಸಿದ್ದೇವೆ ಎಂದು ಅವರು ತಿಳಿಸಿದರು.

2013-14, 2014-15 ಈ ಎರಡು ವರ್ಷಗಳಿಂದ ಕಬ್ಬು ಬೆಳೆಗಾರರಿಗೆ 1,400 ಕೋಟಿ ರೂ.ಬಾಕಿ ಬರಬೇಕಿದೆ. ಆದಷ್ಟು ಶೀಘ್ರದಲ್ಲೇ ಬಾಕಿ ಹಣ ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮನವಿ ಮಾಡಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕುರುಬೂರು ಶಾಂತಕುಮಾರ್ ಹೇಳಿದರು.
ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಪಾವತಿಸಲು ವಿಳಂಬ ಮಾಡಿದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ.
ಈ ಸಂಬಂ
ಧ ಸಂಘದ ರಾಜ್ಯ ಸಮಿತಿ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು. ರೈತರ ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಧೋರಣೆಯನ್ನು ಖಂಡಿಸಿ ರಾಜ್ಯ ರೈತ ಸಂಘದವರು ಡಿ.7ರಂದು ಮಂಡ್ಯದಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಅವರಿಗೆ ಯಾವ ರೀತಿಯಲ್ಲಿ ಬೆಂಬಲ ನೀಡಬೇಕು ಹಾಗೂ ನಮ್ಮ ಹೋರಾಟದ ರೂಪುರೇಷೆಗಳು ಹೇಗಿರಬೇಕು ಎಂಬುದನ್ನು ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಕುರುಬೂರು ಶಾಂತಕುಮಾರ್ ಹೇಳಿದರು.
ಕಬ್ಬು ದರ ನಿಯಂತ್ರಣ ಮಂಡಳಿಯ ಸಭೆಯಲ್ಲಿ ರೈತ ಮುಖಂಡ ಹಾಗೂ ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
♦♦♦

ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಪಾವತಿಸಲು ವಿಳಂಬ ಮಾಡಿದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ. ರೈತರ ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಧೋರಣೆಯನ್ನು ಖಂಡಿಸಿ ರಾಜ್ಯ ರೈತ ಸಂಘದವರು ಡಿ.7ರಂದು ಮಂಡ್ಯದಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.  ಕುರುಬೂರು ಶಾಂತಕುಮಾರ್, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ

Write A Comment