ಕರ್ನಾಟಕ

ಕುಮಾರ ಸ್ವಾಮಿ ವಿರುದ್ಧ ಜಮೀರ್ ಅಹಮದ್ ಗರಂ ಆಗಿ ಹೇಳಿದ್ದೇನು..?

Pinterest LinkedIn Tumblr

hdk

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಷಯ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿದೆ.

ನಮ್ಮನ್ನು ನೀವು ಏನೆಂದು ಭಾವಿಸಿದ್ದೀರಾ…ನಮ್ಮ ಬಗ್ಗೆ ನಿಮಗಿರುವ ಅಭಿಪ್ರಾಯ ಬಹಿರಂಗಪಡಿಸಿ…ಇದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಶಾಸಕ ಜಮೀರ್ ಅಹ್ಮದ್ ನೀಡಿರುವ ತೀರುಗೇಟು.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಮಾರಸ್ವಾಮಿ ವಿರುದ್ಧ ಜಮೀರ್ ಅಹ್ಮದ್ ಏರುಧ್ವನಿಯಲ್ಲೇ ವಾಗ್ದಾಳಿ ನಡೆಸಿದ ಘಟನೆ ನಡೆಯಿತು.

ಮಾಧ್ಯಮದ ಮುಂದೆ ಹೋಗಬಾರದು ಅಂತ ಹೇಳುತ್ತೀರಾ? ಹಾಗಾದ್ರೆ ನೀವ್ಯಾಕೆ ಮಾಧ್ಯಮದ ಮುಂದೆ ಹೇಳಿಕೆ ನೀಡುತ್ತೀರಾ? ಎಂದು ಜಮೀರ್ ಕುಮಾರಸ್ವಾಮಿಯನ್ನು ಪ್ರಶ್ನಿಸಿ, ನೀವು ಹೇಳಿಕೆ ಕೊಟ್ಟಿದ್ದಕ್ಕೆ ನಾನು ಕೂಡಾ ಹೇಳಿಕೆ ನೀಡಿದ್ದೇನೆ ಎಂದು ಗರಂ ಆಗಿಯೇ ಮಾತನಾಡಿದ್ದಾರೆ ಎನ್ನಲಾಗಿದೆ.

Write A Comment