ಕರ್ನಾಟಕ

ಪರಿಷತ್ ಚುನಾವಣೆಗೆ ‘ಕೈ’ ಪಟ್ಟಿ ಸಿದ್ಧ: ಸೋನಿಯಾ, ರಾಹುಲ್ ಒಪ್ಪಿಗೆ ಪಡೆದು ಪ್ರಕಟ; ಸಿಎಂ

Pinterest LinkedIn Tumblr

siddu30ನವದೆಹಲಿ: ವಿಧಾನ ಪರಿಷತ್ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಹೈಕಮಾಂಡ್ ಒಪ್ಪಿಗೆಗಾಗಿ ಕಾಯುತ್ತಿದೆ.

ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ಎಐಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರೊಂದಿಗೆ ಸಭೆ ನಡೆಸಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಇಂದಿನ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದ್ದೇವೆ. ಈ ಪಟ್ಟಿಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕಳುಹಿಸಲಾಗುವುದು. ಅವರು ಒಪ್ಪಿಗೆ ನೀಡಿದ ನಂತರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಎಲ್ಲಾ ಕ್ಷೇತ್ರಗಳಿಗೂ ಹೆಚ್ಚಿನ ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ. ಆದರೂ ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಸಿಎಂ ಹೇಳಿದರು.

Write A Comment