ಕರ್ನಾಟಕ

ತನಗೆ ಮತ್ತು ತಂದೆಗೆ ಪೊಲೀಸರು ಅವಾಚ್ಯ ಶಬ್ಧಗಳಿಂದ ಬೈದರೆಂದು ಆತ್ಮಹತ್ಯೆ ಮಾಡಿಕೊಂಡ ಬಿಕಾಂ ವಿದ್ಯಾರ್ಥಿ

Pinterest LinkedIn Tumblr

sucide

ಮೈಸೂರು, ಡಿ.೩-ಗಲಾಟೆ ಪ್ರಕರಣ ಒಂದರಲ್ಲಿ ಪೊಲೀಸರು ಅನಗತ್ಯವಾಗಿ ಠಾಣೆಗೆ ಕರೆಸಿ ತನಗೆ ಮತ್ತು ತಂದೆಗೆ ಅವಾಚ್ಯ ಶಬ್ಧಗಳಿಂದ ಬೈದು ಕಿರುಕುಳ ನೀಡಿದ್ದರಿಂದ ಬಿಕಾಂ ವಿದ್ಯಾರ್ಥಿಯೊಬ್ಬ ಕಾಲೇಜು ಆವರಣದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೆ.ಆರ್.ನಗರದ ನಿವಾಸಿ ರವಿಕುಮಾರ್ (೨೧)ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿ.  ರಸ್ತೆಯಲ್ಲಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದವೇಳೆ ಮೂನ್‌ರಾಜ್ ಎಂಬುವವನೊಂದಿಗೆ ರವಿಕುಮಾರ್ ಜಗಳ ಮಾಡಿಕೊಂಡಿದ್ದ. ಇದನ್ನೆ ದೊಡ್ಡದು ಮಾಡಿಕೊಂಡು ಮೂನ್‌ರಾಜ್ ತಂದೆ ಕೆ.ಆರ್.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದೆ.

ಈ ವೇಳೆ ಪೊಲೀಸರು ರವಿಕುಮಾರ್ ಮತ್ತು ಆತನ ತಂದೆಯನ್ನು ಠಾಣೆಗೆ ಕರೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಖಾಲಿ ಪತ್ರಕ್ಕೆ ಸಹಿ ಮಾಡಿಸಿಕೊಂಡು ಕಿರುಕುಳ ನೀಡಿದ್ದರಿಂದ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದು ಕಾಲೇಜು ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಯನ್ನು ಸ್ಥಳೀಯರು ಕೆ.ಆರ್.ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿಕುಮಾರನ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರನಿಗಾಘಟಕದಲ್ಲಿ ಇರಿಸಲಾಗಿದೆ. ಈತ ಜೀವನ್ಮರಣದೊಂದಿಗೆ ಹೋರಾಡುತ್ತಿದ್ದಾನೆ.

Write A Comment