ಕರ್ನಾಟಕ

ಬಳ್ಳಾರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿಗೆ ತಡೆಯಾಜ್ಞೆ

Pinterest LinkedIn Tumblr

bellary

ಬಳ್ಳಾರಿ, ಡಿ.5: ಇಲ್ಲಿಗೆ ಸಮೀಪದ ಸಿರವಾರ ಮತ್ತು ಚಾಗನೂರ್ ಬಳಿ ನಿರ್ಮಿಸಲು ಉದ್ದೇಶಿಸಿದ್ದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿಗೆ ಧಾರವಾಡದ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ವಿಮಾನ ನಿಲ್ದಾಣಕ್ಕೆ 120 ಎಕರೆ ಜಮೀನಿನ ರೈತರು ಭೂಮಿ ನೀಡಲು ವಿರೋಧಿಸಿದ್ದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿತ್ತು. ಅಲ್ಲದೆ, ವಿಮಾನ ನಿಲ್ದಾಣಕ್ಕೆ ಜಮೀನು ನೀಡುವುದಿಲ್ಲ ಎಂದು ಕೆಲ ರೈತರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಮತ್ತು ಬಾಕಿ ಉಳಿದಿದ್ದ ಭೂ-ಸ್ವಾಧೀನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಪ್ರದೇಶದಲ್ಲಿ ಸುಮಾರು 750 ಎಕರೆ ವಿಸ್ತೀರ್ಣದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಈ ಹಿಂದಿನ ಬಿಜೆಪಿ ಸರ್ಕಾರ ಕಾಮಗಾರಿ ಕೈಗೆತ್ತಿಕೊಂಡಿತ್ತು.

ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಹಾಗೂ ನ್ಯಾಯಾಲಯದ ಮೊರೆಹೋಗಿದ್ದರಿಂದ ಈಗ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

Write A Comment