ಕರ್ನಾಟಕ

ಉಪ ಲೋಕಾಯುಕ್ತ ಅಡಿ ಪದಚ್ಯುತಿಗೆ ಸಾಕ್ಷ್ಯಗಳ ಕೊರತೆ: ಕಾಗೋಡು ತಿಮ್ಮಪ್ಪ

Pinterest LinkedIn Tumblr

kagodu

ಬೆಂಗಳೂರು: ಉಪ ಲೋಕಾಯುಕ್ತ ನ್ಯಾ. ಸುಭಾಷ್ ಬಿ ಅಡಿ ಅವರ ಪದಚ್ಯುತಿಗೆ ಸಾಕ್ಷ್ಯಗಳ ಕೊರತೆ ಇದೆ ಎಂದು ಶನಿವಾರ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಹೇಳಿದ್ದಾರೆ.

ಇಂದು ವಿಶೇಷ ತನಿಖಾ ದಳದ ಮುಖ್ಯಸ್ಥ ಕಮಲ್ ಪಂಥ್ ಅವರನ್ನು ತಮ್ಮ ಕಚೇರಿಗೆ ಕರೆಯಿಸಿಕೊಂಡು ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್, ವಿಧಾನಸಭೆಯಲ್ಲಿ ಉಪ ಲೋಕಾಯುಕ್ತರ ಪದಚ್ಯುತಿ ಪ್ರಸ್ತಾಪಕ್ಕೆ ಸಲ್ಲಿಕೆಯಾಗಿರುವ ದಾಖಲೆಗಳು ಮೇಲ್ನೋಟಕ್ಕೆ ಮನವರಿಯಾಗಿವೆ. ಆದರೆ ಈಗ ಸಲ್ಲಿಕೆಯಾಗಿರುವ ದಾಖಲೆಗಳು ಸಾಕಾಗುವುದಿಲ್ಲ. ಇನ್ನು ಹೆಚ್ಚಿನ ದಾಖಲೆಗಳ ಅಗತ್ಯ ಇದೆ ಎಂದರು.

ಲೋಕಾಯುಕ್ತ ಪದಚ್ಯುತಿಗೆ ಸಂಬಂಧಿಸಿದಂತೆ ಸಾಕಷ್ಟು ದಾಖಲೆಗಳಿವೆ. ಆದರೆ ಉಪ ಲೋಕಾಯುಕ್ತರ ಪದಚ್ಯುತಿಗೆ ಸಲ್ಲಿಕೆಯಾಗಿರುವ ದಾಖಲೆಗಳು ಸಾಲದು. ಹೀಗಾಗಿ ಪೂರಕ ಮಾಹಿತಿ ಪಡೆಯುತ್ತಿರುವುದಾಗಿ ಸ್ಪೀಕರ್ ತಿಳಿಸಿದರು.

ದಾಖಲೆಗಳನ್ನು ಸಂಪೂರ್ಣ ಪರಿಶೀಲಿಸಿದ ಬಳಿಕವೇ ಈ ಎರಡೂ ಪ್ರಸ್ತಾಪಗಳನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಕಳುಹಿಸಲಾಗುವುದು ಎಂದು ಕಾಗೋಡು ತಿಮ್ಮಪ್ಪ ಅವರು ಹೇಳಿದರು.

Write A Comment