ಕರ್ನಾಟಕ

ಲೋಕಾಯುಕ್ತರನ್ನು ಬಂಧಿಸಿ ವಿಚಾರಣೆ ನಡೆಸಿ: ಎಸ್.ಆರ್.ಹಿರೇಮಠ ಒತ್ತಾಯ

Pinterest LinkedIn Tumblr

hiremath

ಧಾರವಾಡ,ಡಿ.6: ಲೋಕಾಯುಕ್ತ ಸಂಸ್ಥೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ಎಸಗಿರುವ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರನ್ನು ಕೂಡಲೇ ಬಂಧಿಸಿ ವಿಚಾರಣೆಗೊಳಪಡಿಸಬೇಕೆಂದು ಸಮಾಜ ಪರಿವರ್ತನಾ ಸಮಾಜದ(ಎಸ್‌ಪಿಎಸ್) ಮುಖ್ಯಸ್ಥ ಎಸ್.ಆರ್.ಹಿರೇಮಠ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಸಂಸ್ಥೆಯ ಘನತೆ ಗೌರವ ಕಾಪಾಡಲು ಹಾಗೂ ಜನರ ವಿಶ್ವಾಸ ಪಡೆಯಲು ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರನ್ನು ಕೂಡಲೇ ಹುದ್ದೆಯಿಂದ ಕಿತ್ತೊಗೆದು ದಕ್ಷ ವ್ಯಕ್ತಿಯನ್ನು ಮರು ನೇಮಕ ಮಾಡಬೇಕೆಂದು ಒತ್ತಾಯಿಸಿದರು.

ಸರ್ಕಾರ ಈ ವಿಷಯ ಬಿಟ್ಟು ಅನವಶ್ಯಕವಾಗಿ ಉಪಲೋಕಾಯುಕ್ತರ ಬೆನ್ನು ಬಿದ್ದಿದೆ.ಇದು ದುರದೃಷ್ಟಕರ. ಲೋಕಾಯುಕ್ತದಲ್ಲಿನ ಭ್ರಷ್ಟಾಚಾರವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಜನರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಜುಲೈನಲ್ಲಿ ಎಸ್‌ಪಿಎಸ್ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿತ್ತು. ಅದಕ್ಕೆ ನ್ಯಾ. ಕೆ.ಎಂ.ಫಣೀಂದ್ರ ಹಾಗೂ ನ್ಯಾ.ಎಚ್.ಬಿಳ್ಳಪ್ಪ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿತ್ತು. ಲೋಕಾಯುಕ್ತದಲ್ಲಿನ ಭ್ರಷ್ಟಾಚಾರವನ್ನು ಸಿಬಿಐಗೆ ವಹಿಸುವಂತೆ ನೋಟಿಸ್ ಕಳುಹಿಸಿದೆ ಎಂದು ಹಿರೇಮಠ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Write A Comment