ಕರ್ನಾಟಕ

‘ಕೈ’ ಬಂಡಾಯ ಅಭ್ಯರ್ಥಿಗಳ ವಿರುದ್ಧ ಶಿಸ್ತು ಕ್ರಮ

Pinterest LinkedIn Tumblr

PARAMU

ಬೆಂಗಳೂರು, ಡಿ.10: ಮೇಲ್ಮನೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ಪಕ್ಷದ ಕಾರ್ಯಕರ್ತರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಗೂ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಕ್ಷೇತ್ರದಿಂದ ಮೇಲ್ಮನೆಗೆ ಸ್ಪರ್ಧಿಸಿರುವ ದಯಾನಂದರೆಡ್ಡಿ ಜೊತೆ ಈಗಾಗಲೇ ಸಮಾಲೋಚನೆ ನಡೆಸಿದ್ದೇನೆ. ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಬಂಡಾಯ ಅಭ್ಯರ್ಥಿಗಳಿಗೆ ತಮ್ಮ ಉಮೇದುವಾರಿಕೆ ಹಿಂಪಡೆಯಲು ಮನವೊಲಿಸಲಾಗಿದೆ ಎಂದರು.

ಪಕ್ಷದ ಶಿಸ್ತು ಉಲ್ಲಂಘಿಸಿ ಒಂದು ವೇಳೆ ಕಣದಲ್ಲೇ ಉಳಿದರೆ ಅವರೆಲ್ಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದ ಪರಮೇಶ್ವರ್, ಮೇಲ್ಮನೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Write A Comment