ಹಿರಿಯೂರು, ಡಿ.12: ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರು ಚಾಲಕ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆ.ಆರ್.ಹಳ್ಳಿ ಗೇಟ್‌ನ ಚಿಕನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ದಾವಣೆರೆ ಟೌನ್ ಅಜಾದ್‌ನಗರದ ವಾಸಿ ದಾದಾಪೀರ್ ಮೃತಪಟ್ಟ ದುರ್ದೈವಿ. ತಾಲ್ಲೂಕಿನ ಕೆ.ಆರ್.ಹಳ್ಳಿ ಗೇಟ್ ಮುಂದಿನ ಎನ್‌ಎಚ್ 4ರಲ್ಲಿ ರಸ್ತೆ ದಾಟುತ್ತಿದ್ದ ದಾದಾಪೀರ್‌ಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಬೈಕ್‌ಗೆ ಲಾರಿ ಡಿಕ್ಕಿ: ಸವಾರ ಸಾವು :
ಮತ್ತೊಂದು ಪ್ರಕರಣದಲ್ಲಿ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವನಗರದ ನಿವಾಸಿ ಗಂಗರಾಜ್ (24) ಮೃತಪಟ್ಟ ದುರ್ದೈವಿ.
ಹಿಂಬದಿ ಸವಾರ ಕಿರಣ್‌ಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.