ಕರ್ನಾಟಕ

ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ

Pinterest LinkedIn Tumblr

basana_gowda_yatnal

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯಪುರ-ಬಾಗಲಕೋಟೆ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.

ಡಿಸೆಂಬರ್ 27ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ನ 25 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಯತ್ನಾಳ್ ನಾಮಪತ್ರ ಹಿಂಪಡೆಯಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಮತ್ತು ಬಿಜೆಪಿ ರಾಜ್ಯಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂಬ ಬೇಡಿಕೆಯಿಟ್ಟಿದ್ದರು. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಯತ್ನಾಳ್ ಬೇಡಿಕೆಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ನಾಮಪತ್ರ ಹಿಂಪಡೆಯಲು ನಿರಾರಕರಿಸಿದ್ದರು.

Write A Comment