ಕರ್ನಾಟಕ

ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಮಾಜಿ ಪ್ರಧಾನಿ ದೇವೇಗೌಡ

Pinterest LinkedIn Tumblr

mo-de

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ವೇಳೆ ಮೋದಿ ಪ್ರಧಾನಿಯಾದ್ರೆ ಕರ್ನಾಟಕ ತೊರೆಯುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಷ್ಠ ದೇವೇಗೌಡ ಅವರು ಈಗ ಅದೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ.

ನಿನ್ನೆಯಷ್ಟೇ ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಬಂದಿದ್ದ ದೇವೇಗೌಡ ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ದೇಶದಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಯಾಗುತ್ತಿದೆ. ಪ್ರಧಾನಿ ಮೋದಿ ಡೌನ್ ಟು ಅರ್ಥ್ ಇದ್ದಾರೆ ಎಂದರು.

ಹೊರ ದೇಶಗಳಿಂದ ಭಾರತಕ್ಕೆ ಬಂಡವಾಳ ಬರಬೇಕಾದರೆ ದೇಶದಲ್ಲಿ ಅದಕ್ಕೆ ಪೂರಕವಾದ ವಾತಾವರಣ ಇರಬೇಕಾಗುತ್ತದೆ. ಹೀಗಾಗಿ ಮೋದಿ ವಿದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಮತ್ತು ದೇಶದಲ್ಲಿ ಬಂಡವಾಳ ಹೂಡಿಕೆಗೆ ಸೂಕ್ತ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹಾಲಿ ಪ್ರಧಾನಿಯ ವಿದೇಶ ಪ್ರವಾಸವನ್ನು ಸಮರ್ಥಿಸಿಕೊಂಡರು.

ಇದೇ ವೇಳೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೈಸರೂ, ಮಂಡ್ಯ ಹಾಗೂ ಕೋಲಾರ ಬಂಡಾಯ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪೆಡಿದ್ದು, ಬಂಡಾಯ ಶಮನಕ್ಕೆ ಶ್ರಮಿಸಿದ ಎಲ್ಲರಿಗೂ ಧನ್ಯವಾದ ಎಂದರು. ಅಲ್ಲದೆ ಚುನಾವಣೆಯಲ್ಲಿ ಜೆಡಿಎಸ್ 10ರಿಂದ 12 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.

ರಾಷ್ಟ್ರೀಯ ಪಕ್ಷಗಳ ಎದುರು ಹಣ ಬಲದಿಂದ ಗೆಲ್ಲಲಾಗಲ್ಲ. ಹಾಗಂತ ಜೆಡಿಎಸ್ ಅಭ್ಯರ್ಥಿಗಳಿಗೆ ಗೆಲ್ಲುವ ಶಕ್ತಿ ಇಲ್ಲವೆಂದಲ್ಲ. ಐಕ್ಯತೆಯಿಂದ 10ರಿಂದ 12 ಕ್ಷೇತ್ರಗಳಲ್ಲಿ ಗೆಲುವು ಸಾಧ್ಯ ಎಂದರು.

ಪ್ರಧಾನಿ ಮೋದಿ ಅವರನ್ನು ಶುಕ್ರವಾರ ಸಂಸತ್‌ ಭವನದಲ್ಲಿ ಭೇಟಿ ಮಾಡಿದ್ದ ಮಾಜಿ ಪ್ರಧಾನಿ ಸುಮಾರು 15 ನಿಮಿಷ ಮಾತುಕತೆ ನಡೆಸಿದರು. ಉತ್ತರ ಕರ್ನಾಟಕದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ, ರೈತರ ಆತ್ಮಹತ್ಯೆ ಪ್ರಕರಣಗಳು ಹಾಗೂ 14ನೇ ಹಣಕಾಸು ಯೋಜನೆಯಲ್ಲಿ ನಿಗದಿಪಡಿಸಿರುವ ಅನುದಾನ ಮೊದಲಾದ ವಿಷಯಗಳನ್ನು ಕುರಿತು ಅವರು ಚರ್ಚಿಸಿದ್ದರು.

Write A Comment