ಕರ್ನಾಟಕ

ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಮುದುಕನಿಂದ ಅತ್ಯಾಚಾರ

Pinterest LinkedIn Tumblr

rapeಬೆಂಗಳೂರು: ದೇಶದಲ್ಲಿ ಅತ್ಯಾಚಾರ ಸರಣಿ ಬಿಡುವಂತಿಲ್ಲ. ನಿನ್ನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 7 ವರ್ಷದ ಬಾಲಕಿ ಮೇಲೆ ಮೂವರು ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಇದೀಗ ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ 55 ವರ್ಷದ ಮುದುಕು ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ವಾಸವಾಗಿದ್ದ ಆಟೋ ಚಾಲಕ 55 ವರ್ಷದ ಲಕ್ಷ್ಮಣ್ ತನ್ನ ನೆರೆಯಲ್ಲಿದ್ದ 7 ವರ್ಷದ ಬಾಲಕಿಯನ್ನು ಬೋಂಡಾ ಕುಡಿಸುವುದಾಗಿ ಹೇಳಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 11 ರಂದು ಪ್ರಕರಣ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ದೂರು ನೀಡಿದ 12 ಗಂಟೆಯೊಳಗೆ ಆರೋಪಿ ಲಕ್ಷ್ಮಣ್ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದು, ಪೋಕ್ಸೋ ಕಾಯ್ದೆಯಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Write A Comment