ಕರ್ನಾಟಕ

RTE ಅಡಿ LKG, UKG ಪ್ರವೇಶಕ್ಕೆ ಹೈಕೋರ್ಟ್ ತಡೆ

Pinterest LinkedIn Tumblr

rteಬೆಂಗಳೂರು : 2015 & 2016ನೇ ಶೈಕ್ಷಣಿಕ ಸಾಲಿನಲ್ಲಿ ಆರ್ ಟಿಇ ಅಡಿ ಎಲ್ ಕೆಜಿ, ಯುಕೆಜಿ ಪ್ರವೇಶಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

1ರಿಂದ 8ನೇ ತರಗತಿಯವರೆಗೆ ಉಚಿತ ಶಿಕ್ಷಣ ನೀಡಬೇಕೆಂದು ಸರ್ಕಾರ ಕಾನೂನು ರೂಪಿಸಿದೆ. ಅಲ್ಲದೇ ಖಾಸಗಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿಗೂ ಆರ್ ಟಿಇ ಅಡಿ ಪ್ರವೇಶ ನೀಡಬೇಕೆಂದು ರಾಜ್ಯ ಸರ್ಕಾರ ಸೂಚಿಸಿತ್ತು. ಆದರೆ ಸರ್ಕಾರದ ಸೂಚನೆ ವಿರುದ್ಧ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್ ನಲ್ಲಿ ರಿಟ್ ಹಾಕಿದ್ದವು.

ಸರ್ಕಾರದ ಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ,  ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಆರ್ ಟಿಇ ಅಡಿ ಎಲ್ ಕೆಜಿ, ಯುಕೆಜಿ ಪ್ರವೇಶಕ್ಕೆ ಮಧ್ಯಂತರ ತಡೆಯಾಜ್ಞೆ ಆದೇಶ ನೀಡಿದೆ.

Write A Comment