ಕರ್ನಾಟಕ

ಸಚಿವ ಅರುಣ್ ಜೇಟ್ಲಿ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ : ಸದಾನಂದಗೌಡ

Pinterest LinkedIn Tumblr

sadaಬೆಂಗಳೂರು, ಡಿ.25-ದೆಹಲಿ ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಹಗರಣದಲ್ಲಿ ಎಎಪಿ ಮತ್ತು ಕಾಂಗ್ರೆಸ್ ಪಕ್ಷ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ವಿರುದ್ಧ ವಿನಾಕಾರಣ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಾನೂನು ಸಚಿವ ಡಿ.ವಿ.ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರುಣ್ ಜೇಟ್ಲಿ ಕಳೆದ 3 ದಶಕಗಳಿಂದ ಸಾರ್ವಜನಿಕ ಸೇವೆಯಲ್ಲಿದ್ದಾರೆ. ಇದುವರೆಗೂ ಆವರ ಮೇಲೆ ಯಾವುದೇ ರೀತಿಯ ಭ್ರಷ್ಟಾಚಾರ ಆರೋಪ ಕೇಳಿಬಂದಿರಲಿಲ್ಲ. ಈಗ ಅನಗತ್ಯವಾಗಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ ನಡೆಯುತ್ತಿದೆ ಎಂದರು.

ಅರುಣ್ ಜೇಟ್ಲಿ ಯಾವುದೇ ತಪ್ಪು ಮಾಡಿಲ್ಲ ಎಂಬ ಮನೋಭಾವನೆ ಪಕ್ಷಕ್ಕಿದೆ. ಕಾಂಗ್ರೆಸ್ ಹಾಗೂ ಎಎಪಿ, ನಮ್ಮ ಸರ್ಕಾರದ ಯಾವುದೇ ಹಗರಣಗಳು ಸಿಗದಿರುವ ಕಾರಣ ಇಂತಹ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿವೆ ಎಂದು ಕಿಡಿ ಕಾರಿದರು.

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ಜನತೆಗೆ ಕೊಟ್ಟಿದ್ಧ ಆಶ್ವಾಸನೆಯಂತೆ ಪಾರದರ್ಶಕ ಮತ್ತು ಸ್ವಚ್ಛ ಆಡಳಿತ ನೀಡುತ್ತಿದ್ದಾರೆ. ಇದನ್ನು ಸಹಿಸದ ಪ್ರತಿಪಕ್ಷಗಳು ದಿನಂಪ್ರತಿ ಒಂದಲ್ಲ ಒಂದು ಆಧಾರ ರಹಿತ ಟೀಕೆ ಮಾಡುತ್ತಿವೆ ಎಂದು ಸದಾನಂದಗೌಡ ಹರಿಹಾಯ್ದರು.

ಸಮರ್ಥನೆ:
ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಪುತ್ರ ರೋಹನ್ ಜೇಟ್ಲಿಯನ್ನು ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ವಕೀಲರನ್ನಾಗಿ ನೇಮಕ ಮಾಡಿರುವ ಕ್ರಮವನ್ನು ಸದಾನಂದಗೌಡ ಸಮರ್ಥಿಸಿಕೊಂಡರು.   ಕಾನೂನು ಪ್ರಕಾರವೇ ರೋಹನ್ ಜೇಟ್ಲಿಯನ್ನು ನೇಮಕ ಮಾಡಲಾಗಿದೆ. ಕಾನೂನು ಆಯೋಗದ ಸಲಹೆ ಪಡೆದು ಅವರನ್ನು ಕೇಂದ್ರ ಸರ್ಕಾರದ ಪರವಾಗಿ ನೇಮಕ ಮಾಡಲಾಗಿದ್ದು, ಯಾವುದೇ ಕಾನೂನು ಉಲ್ಲಂಘನೆ ಮಾಡಿಲ್ಲ ಎಂದರು.

Write A Comment