ಕರ್ನಾಟಕ

ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಡಿಕ್ಕಿ: 8 ಮಂದಿ ದಾರುಣ ಸಾವು

Pinterest LinkedIn Tumblr

accidentfffಬಿದರೆಗುಡಿ(ಶಿವಮೊಗ್ಗ): ಎರಡು ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಸೇರಿ 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ.

ಶಿವಮೊಗ್ಗದಲ್ಲಿ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗಳ ನಡುವೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಬಿದರೆಗುಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ನಾಲ್ವರು ಪುರುಷರು ಸೇರಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಳಿದಂತೆ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳು ಜಿಲ್ಲಾಸ್ಪತ್ರೆ ಹಾಗೂ ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಕಳೆದ ರಾತ್ರಿ 2 ಗಂಟೆ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲೆಯ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊನ್ನವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment