ಕರ್ನಾಟಕ

ರೆಡ್ಡಿ ಮನೆಗೆ ಲೋಕಾ ದಾಳಿ, ಅಪಾರ ಚಿನ್ನ ವಶ; ಸಿಎಂ ವಿರುದ್ಧ ಕಿಡಿ

Pinterest LinkedIn Tumblr

Lokayukta_Kranata

ಬೆಂಗಳೂರು : ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನಿವಾಸಗಳು ಮತ್ತು ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬೆಳಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಬಳ್ಳಾರಿಯ ನಿವಾಸಕ್ಕೆ ಹಿಂಬಾಗಿಲಿನ ಮೂಲಕ ಪ್ರವೇಶಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ . ಈ ವೇಳೆ ನಿವಾಸದಲ್ಲಿ ಸಂಸದ ಶ್ರೀರಾಮುಲು ಅವರು ಇದ್ದರು ಎಂದು ಹೇಳಲಾಗಿದೆ.

ಬೆಂಗಳೂರಿನ ಪಾರಿಜಾತ ನಿವಾಸದ ಮೇಲೆ ಲೋಕಾಯುಕ್ತ ಡಿವೈಎಸ್ಪಿ ವೆಂಕಟ್ ಸ್ವಾಮಿ ನೇತ್ರತ್ವದಲ್ಲಿ 12ಕ್ಕೂ ಹೆಚ್ಚು ಮಂದಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ .

2007 ರಿಂದ 2011ರ ಅವಧಿಯಲ್ಲಿ 11 ಬೇನಾಮಿ ಕಂಪೆನಿಗಳನ್ನುಸೃಷ್ಟಿಸಿ ಅಕ್ರಮಗಣಿಗಾರಿಕೆ ನಡೆಸುವ ಮೂಲಕ 362.73 ಕೋಟಿ ರೂಪಾಯಿ ಹಣವನ್ನು ಗಳಿಸಿದ್ದಾರೆ ಎನ್ನುವ ಕಾರಣಕ್ಕೆ ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸತ್ತಿದ್ದಾರೆ ಎಂದು ಮಾದ್ಯಮಗಳಲ್ಲಿ ವರದಿಯಾಗಿದೆ.

ರಾಜ್ಯ ಸರ್ಕಾರದ ವಿರುದ್ದ ಶ್ರೀರಾಮುಲು ಕಿಡಿ

ದಾಳಿಯ ಬಳಿಕ ದಿಢೀರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಶ್ರೀರಾಮುಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮನ್ನು ನಿರ್ನಾಮ ಮಾಡುತ್ತಿದ್ದಾರೆ. ಆದರೆ ಜನರ ಆಶೀರ್ವಾದ ನಮ್ಮ ಮೇಲಿದೆ. ಸಾಮರ್ಥ್ಯವಿದ್ದರೆ ಅಕ್ರಮ ಮರಳು ಗಾರಿಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಿ. ಇದರಲ್ಲಿ ಸಿದ್ದರಾಮಯ್ಯ ಅವರ ಪುತ್ರ ಮತ್ತು ಆಪ್ತರು ಭಾಗಿಯಾಗಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ರಾಜ್ಯದ ವಿವಿಧೆಡೆ ದಾಳಿ

ಭೃಷ್ಟ ಅಧಿಕಾರಿಗಳ ಬೆನ್ನು ಬಿದ್ದಿರುವ ಲೋಕಾಯುಕ್ತ ಪೊಲೀಸರು ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ …
-ಉದಯವಾಣಿ

Write A Comment