ಮಾಗಡಿ, ಜ.5-ಕಾವೇರಿ ನೀರಾವರಿ ನಿಗಮದ ವತಿಯಿಂದ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ 325 ಕೋಟಿ ರೂ. ವೆಚ್ಚದ 83 ಕೆರೆಗಳಿಗೆ ನೀರು ತುಂಬಿಸುವ ಹೇಮಾವತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿದರು.
ತುಮಕೂರು ಶಾಖಾ ನಾಲೆಯಿಂದ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕು ಮತ್ತು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಉತ್ತರಿದುರ್ಗ ಹೋಬಳಿಯ ಗ್ರಾಮಗಳ 83 ಕೆರೆಗಳು ಈ ಯೋಜನೆಗೆ ಒಳಪಡಲಿವೆ.
ಈ ಸಂದರ್ಭದಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡ, ಸಂಸದ ಡಿ.ಕೆ.ಸುರೇಶ್, ಶಾಸಕ ಬಾಲಕೃಷ್ಣ ಸೇರಿದಂತೆ ಮತ್ತಿತರರಿದ್ದರು.