ರಾಮನಗರ: ಕನಕಪುರ ತಾಲೂಕಿನ ಭೀಮೇಗೌಡನದೊಡ್ಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರನ್ನು ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಈ ಹತ್ಯೆ ನಡೆಸಿರಬಹುದು ಎಂದು ಶಂಕಿಸಲಾಗಿದೆ.
49 ವರ್ಷದ ಗೌರಮ್ಮ, 15 ವರ್ಷದ ಸುಕನ್ಯಾ, 58 ವರ್ಷದ ಮಾರೇಗೌಡ ಕೊಲೆಯಾದವರು ಎಂದು ತಿಳಿದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಈ ಮೂವರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದ್ದು, ಕೊಲೆಗೆ ನಿಖರ ಕಾರಣ ನಿಗೂಢವಾಗಿಯೇ ಇದೆ. ಘಟನೆ ಸಂಬಂಧ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.