ಕರ್ನಾಟಕ

ಚುನಾವಣೆಗೆ ಕಾಂಗ್ರೆಸ್ ಸಿದ್ಧ ಎಂದ ಸಿಎಂ ಸಿದ್ದರಾಮಯ್ಯ

Pinterest LinkedIn Tumblr

siಬೆಂಗಳೂರು: ಚುನಾವಣೆಗೆ ಕಾಂಗ್ರೆಸ್ ಪಕ್ಷ ಯಾವಾಗಲೂ ಸಿದ್ಧ. ನಾವು ಚುನಾವಣೆಗೆ ಹೆದರಲ್ಲ. ಚುನಾವಣೆ ಯಾವತ್ತು ಬರುತ್ತದೆ ಎಂದು ನಾವು ಕಾಯುತ್ತಿದ್ದೇವೆ. ಆದರೆ ಬಿಜೆಪಿ ನಾವು ಹೆದರುತ್ತಿದ್ದೇವೆ ಎಂದು ಸುಳ್ಳು ಹೇಳುತ್ತಿದೆಯಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆಯ ಬಳಿಕ ಮಾತನಾಡಿದರು. ಎಸ್​ಸಿಎಸ್​ಪಿ/ಟಿಎಸ್​ಪಿ ಸಭೆ ಬುಧವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆಯಿತು.

ನಮ್ಮ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಆದರೂ 20ರ ಒಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತೇವೆ ಎಂದು ಹೇಳಿದ ಅವರು, ಲೋಕಾಯುಕ್ತ ನೇಮಕ ವಿಚಾರಕ್ಕೆ ಸಂಬಂಧಿಸಿ ಮಾತನಾಡಿ ಇನ್ನೆರಡು ದಿನದಲ್ಲಿ ರಾಜ್ಯಪಾಲರಿಗೆ ಹೆಸರು ಶಿಫಾರಸು ಮಾಡುತ್ತೇವೆ ಎಂದಿದ್ದಾರೆ. ಇದೇ ವೇಳೆ ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ಮಾತನಾಡಿದ ಸಿಎಂ, ಪರಮೇಶ್ವರ್ ವಿರುದ್ಧ ಎಸ್.ಟಿ.ಸೋಮಶೇಖರ್ ಯಾಕೆ ಅಸಮಾಧಾನಗೊಂಡಿದ್ದಾರೆ ಎನ್ನುವುದರ ಬಗ್ಗೆ ಅವರೊಂದಿಗೆ ಮಾತನಾಡಿದ್ದೇನೆ ಎಂದಿದ್ದಾರೆ.

Write A Comment