ಕರ್ನಾಟಕ

ಉಪ ಚುನಾವಣೆ: ಹೆಬ್ಬಾಳದಿಂದ ನಾರಾಯಣಸ್ವಾಮಿಗೆ ಬಿಜೆಪಿ ಟಿಕೆಟ್

Pinterest LinkedIn Tumblr

narayanswamiಬೆಂಗಳೂರು: ಹೆಬ್ಬಾಳ ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರು ಕಣಕ್ಕಳಿಯುವುದು ಖಚಿತವಾಗಿದೆ.

ಈ ಸಂಬಂಧ ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹೆಬ್ಬಾಳ ಕ್ಷೇತ್ರದಲ್ಲಿ ಕೋಲಾರ ಮೂಲದ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದ್ದು, ಇಂದು ಸಂಜೆ ಪಕ್ಷ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.

ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಎರಡು ಬಾರಿ ಆಯ್ಕೆಯಾಗಿದ್ದ ನಾರಾಯಣಸ್ವಾಮಿ ಅವರು ಈಗ ವಿಧಾಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ವೈಯಕ್ತಿಕ ಕಾರಣಗಳಿಂದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Write A Comment