ಕರ್ನಾಟಕ

ಡಿಸೆಂಬರ್ ತಿಂಗಳೊಂದರಲ್ಲೇ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ 59 ಶಿಶುಗಳ ಸಾವು

Pinterest LinkedIn Tumblr

mysoreಮೈಸೂರು, ಜ.22-ಚೆಲುವಾಂಬ ಆಸ್ಪತೆಯಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ 59 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ದೇವರಾಜ ಠಾಣೆ ಪೊಲೀಸರು ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ. ಚೆಲುವಾಂಬ ಆಸ್ಪತ್ರೆಯಲ್ಲಿ ಸಂಭವಿಸುತ್ತಿರುವ ಮಕ್ಕಳ ಸಾವಿನ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಈ ಮಾಹಿತಿ ದೊರೆತಿದೆ.

ಆಸ್ಪತ್ರೆಯ ಮೆಡಿಕಲ್ ಸೂಪರಿಂಡೆಂಟ್ ಕಚೇರಿಯ ಅಂಕಿ ಅಂಶಗಳ ಫಲಕದಲ್ಲಿ ಮಾಹಿತಿ ಒದಗಿಸಲಾಗಿದೆ. ಶೌಚಾಲಯದಲ್ಲಿ ಶಿಶುವಿನ ಮೃತದೇಹ ಪತ್ತೆ ಕುರಿತಂತೆ ತನಿಖೆ ನಡೆಸಲು ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿರುವ 5 ದಿನಗಳ ವೀಡಿಯೋಗಳ ಪರಿಶೀಲನೆ ನಡೆಸುತ್ತಿದ್ದು ಆಸ್ಪತ್ರೆ ಸಿಬ್ಬಂದಿಯಿಂದಲೇ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

Write A Comment