ಕರ್ನಾಟಕ

ಸಿಎಂ ಭಾಷಣ ಅರ್ಧಕ್ಕೆ ಮೊಟಕು; ಎತ್ತಿನಹೊಳೆ ಯೋಜನೆ ಬಗ್ಗೆ ಸಂಶಯಬೇಡ

Pinterest LinkedIn Tumblr

Siddaramaiah-(43)ಚಿಕ್ಕಬಳ್ಳಾಪುರ: ಎತ್ತಿನಹೊಳೆ ನೀರಾವರಿ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟಗಾರರ ಮಾತಿನ ಚಕಮಕಿಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ಹೊರಟ ಘಟನೆ ಶನಿವಾರ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಗ್ರಾಮದ ಚದಲಪುರದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುತ್ತಿದ್ದಾಗ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ಪ್ರತಿಭಟನೆಯ ಬಿಸಿ ಮುಟ್ಟಿಸಿಕೊಂಡಿದ್ದ ಮುಖ್ಯಮಂತ್ರಿಗಳು ಭಾಷಣ ಅರ್ಧಕ್ಕೆ ಮೊಟಕುಗೊಳಿಸಿ ಸಮಜಾಯಿಷಿ ನೀಡಿದ್ದರು.

ಎತ್ತಿನಹೊಳೆ ಯೋಜನೆ ಜಾರಿ; ಸಿಎಂ
ಎತ್ತಿನಹೊಳೆ ಯೋಜನೆ ಬದಲು ಪರಮಶಿವಯ್ಯ ವರದಿ ಜಾರಿ ಮಾಡುವಂತೆ ಆಗ್ರಹಿಸಿ ಕಳೆದ 125 ದಿನಗಳಿಂದ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದರು. ಇಂದು ಸಿಎಂ ಕಾರ್ಯಕ್ರಮದಲ್ಲೂ ತಮ್ಮ ಅಸಮಾಧಾನ ಹೊರಹಾಕಿದ್ದರು. ಆಗ ಹೋರಾಟಗಾರರ ಜೊತೆ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಜಾರಿ ಬಗ್ಗೆ ಯಾವುದೇ ಸಂಶಯ ಬೇಡ. ನೀವು ನೀರು ಬೇಡವೆಂದರೂ ನಾವು ನೀರು ಹರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಆದರೆ ಮುಖ್ಯಮಂತ್ರಿಗಳ ಮಾತಿನಿಂದ ಹೋರಾಟಗಾರರು ತೃಪ್ತರಾಗದೆ ಅಸಮಾಧಾನವ್ಯಕ್ತಪಡಿಸಿದ್ದರು.
-ಉದಯವಾಣಿ

Write A Comment