ಬೆಂಗಳೂರು, ಜ.25- ಮುಂದಿನ ತಿಂಗಳ 13ರಂದು ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಯಾವುದೇ ಕ್ಷಣದಲ್ಲಿ ಅಧಿಕೃತವಾಗಿ ಪ್ರಕಟಗೊಳ್ಳಲಿದೆ. ಇಂದು ಸಂಜೆ ಇಲ್ಲವೆ ನಾಳೆಯೊಳಗೆ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿ ಘೋಷಣೆ ಮಾಡಲಿದ್ದು, ಬುಧವಾರ ಅಭ್ಯರ್ಥಿ ಗಳು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಬುಧವಾರ ಕಡೆಯ ದಿನವಾಗಿರುವುದರಿಂದ ನಾಳೆ ಕೇಂದ್ರ ಚುನಾವಣಾ ಸಮಿತಿ ಪಟ್ಟಿ ಪ್ರಕಟಿಸಲಿದೆ. ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರಾದ ಪ್ರಹ್ಲಾದ್ ಜೋಷಿಯವರು ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಲಿದ್ದಾರೆ.
ಈಗಾಗಲೇ ರಾಜ್ಯ ಘಟಕದ ನಾಯಕರು ಹೆಬ್ಬಾಳ, ದೇವದುರ್ಗ ಮತ್ತು ಉತ್ತರ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಟ್ಟಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಕೇಂದ್ರ ವರಿಷ್ಠರು ತೊಡಗಿಸಿಕೊಂಡಿದ್ದರಿಂದ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಚಿತ್ತ ಹರಿಸಿರಲಿಲ್ಲ. ಇದೀಗ ಅಮಿತ್ ಷಾ ಎರಡನೆ ಅವಧಿಗೆ ಆಯ್ಕೆಯಾಗಿದ್ದು, ರಾಜ್ಯ ಘಟಕದ ನಾಯಕರು ಶಿಫಾರಸು ಮಾಡಿ ರುವ ಪಟ್ಟಿಗೆ ಹಸಿರು ನಿಶಾನೆ ತೋರಲಿದ್ದಾರೆ. ರಾಜ್ಯದ ಪ್ರಮುಖರ ಶಿಫಾರಸಿ ನಂತೆ ಹೆಬ್ಬಾಳ ವಿಧಾನಸಭಾ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ, ದೇವದುರ್ಗದಿಂದ ಮಾಜಿ ಸಚಿವ ಶಿವನಗೌಡ ನಾಯಕ್, ಬೀದರ್ ಉತ್ತರದಿಂದ ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ಪುತ್ರ ಸೂರ್ಯಕಾಂತ ನಾಗಮಾರಪಲ್ಲಿ ಹೆಸರನ್ನು ಅಂತಿಮಗೊಳಿಸಲಾಗಿದೆ.
ಈಗಾಗಲೇ ಹೆಬ್ಬಾಳ ಮತ್ತು ದೇವದುರ್ಗ ಕ್ಷೇತ್ರದಲ್ಲಿ ಅಭ್ಯರ್ಥಿ ಗಳು ಒಂದು ಸುತ್ತಿನ ಪ್ರಚಾರ ಆರಂಭಿಸಿದ್ದಾರೆ. ಆದರೆ, ಬೀದರ್ ಉತ್ತರ ಕ್ಷೇತ್ರದ ಅಭ್ಯರ್ಥಿ ಬಿಜೆಪಿ ಯಿಂದ ಸ್ಪರ್ಧಿಸಬೇಕೆ, ಬೇಡವೆ ಎಂಬುದರ ಬಗ್ಗೆ ಗೊಂದಲ ದಲ್ಲಿದ್ದಾರೆ. ಪಕ್ಷ ಅವರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿದ್ದರೂ ಸೂರ್ಯಕಾಂತ ನಾಗಮಾರಪಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ಸ್ಪರ್ಧಿಸುವ ಇಂಗಿತ ವನ್ನು ತಮ್ಮ ಆಪ್ತರ ಬಳಿ
ವ್ಯಕ್ತ ಪಡಿಸಿದ್ದಾರೆಂದು ತಿಳಿದುಬಂದಿದೆ.
ಗಂದಲದಲ್ಲಿ ಬಿಜೆಪಿ:
ಒಂದು ವೇಳೆ ಸೂರ್ಯಕಾಂತ ನಾಗಮಾರ ಪಲ್ಲಿಗೆ ಕಾಂಗ್ರೆಸ್ ಟಿಕೆಟ್ ನೀಡಿ ದರೆ ಬಿಜೆಪಿ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಇಲ್ಲವೆ ಅಶೋಕ್ ಖೇಣಿ ಸಹೋದರ ಸಂಜಯ್ ಖೇಣಿ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ.
ಸೂರ್ಯಕಾಂತ ನಾಗಮಾರಪಲ್ಲಿ ಅವರ ಮುಂದಿನ ನಡೆಯನ್ನು ನೋಡಿಕೊಂಡು ಕೊನೆ ಕ್ಷಣದಲ್ಲಿ ಬದಲಾದರೆ ಇಬ್ಬರಲ್ಲಿ ಒಬ್ಬರು ಬಿಜೆಪಿಗೆ ಸ್ಪರ್ಧೆ ನೀಡುವುದು ಖಚಿತ.