ಬೆಂಗಳೂರು: ಮಠದ ಜಮೀನು ಅಕ್ರಮ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಗೈರು ಹಾಜರಾಗಿದ್ದ ಮುರುಘಾಶ್ರೀಗಳ ವಿರುದ್ಧ ಬೆಂಗಳೂರಿನ 4ನೇ ಎಸಿಎಂಎಂ ಕೋರ್ಟ್ ಮಂಗಳವಾರ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಮಠಕ್ಕೆ ಸಂಬಂಧಪಟ್ಟ ಕೆಂಗೇರಿಯ ಸೂಲಿಕೆರೆಯಲ್ಲಿನ 7ಎಕರೆ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆಂದು ಆರೋಪಿಸಿ ಪಿಎಸ್ ಪ್ರಕಾಶ್ ಎಂಬವರು ದೂರು ದಾಖಲಿಸಿದ್ದರು. ಈ ಬಗ್ಗೆ ಪೊಲೀಸರು ಆರೋಪಪಟ್ಟಿ ಕೂಡಾ ಸಲ್ಲಿಸಿದ್ದರು. ಮಂಗಳವಾರ ವಿಚಾರಣೆಗೆ ಡಾ.ಶಿವಮೂರ್ತಿ ಮುರುಘಾ ಶರಣರು ಗೈರಾಗಿದ್ದರು.
ಈ ಹಿನ್ನೆಲೆಯಲ್ಲಿ ಮುರುಘಾಶರಣರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ.
-ಉದಯವಾಣಿ