ಚಿಕ್ಕಮಗಳೂರು: ಪತ್ನಿ ನೀಡುತ್ತಿದ್ದ ಮಾನಸಿಕ ಕಿರುಕುಳದಿಂದ ಬೇಸತ್ತು ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಸಿ.ಟಿ.ಪ್ರದೀಪ್ (36) ಆತ್ಮಹತ್ಯೆ ಮಾಡಿಕೊಂಡ ಯೋಧ. ಇವರು ಸೋಮವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಪತ್ನಿ, ಅತ್ತೆ ಮತ್ತು ಮಾವನಿಂದ ಮಾನಸಿಕ ಕಿರುಕುಳವಾಗುತ್ತಿದೆ ಎಂದು ಪ್ರದೀಪ್ ಡೆತ್ನೋಟ್ ಬರೆದಿದ್ದಾರೆ.
ಪ್ರದೀಪ್ ಮದ್ರಾಸ್ ರೆಜಿಮೆಂಟ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯೋಜಿತರಾಗಿದ್ದರು. ರಜೆಯ ಮೇಲೆ ಮನೆಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪತ್ನಿ ವಿರುದ್ಧ ಪ್ರಕರಣ ದಾಖಲಾಗಿದೆ.