ಬೆಂಗಳೂರು: ಜೆಡಿಎಸ್ ನಲ್ಲಿ ಮತ್ತೆ ನಾಯಕರ ನಡುವೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿನ್ನೆಲೆಯಲ್ಲಿ ಬುಧವಾರ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ ಎಂ ಶಕೀಲ್ ನವಾಜ್ ಅವರು ರಾಜಿನಾಮೆ ನೀಡಿದ್ದಾರೆ.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ದೇವೇಗೌಡ ಅವರು, ಜಮೀರ್ ಅಹ್ಮದ್ ನನ್ನ ವಿರುದ್ಧ ಉರ್ದು ಭಾಷೆಯಲ್ಲಿ ಜಾಹೀರಾತುಗಳನ್ನು ಹಾಕಿಸಿದ್ದಾರೆ. ಪಕ್ಷಕ್ಕಾಗಿ ದೇವೇಗೌಡರು ಏನ್ ಬೇಕಾದರೂ ಮಾಡುತ್ತಾರೆ ಎಂದು ಹೇಳುತ್ತಾರೆ. ಅವರು ಯಾವ ಪಕ್ಷದಲ್ಲಿದ್ದಾರೆ ಅಂತ ಗೊತ್ತಾ ಎಂದು ಪ್ರಶ್ನಿಸಿದ್ದರು.
ಜಮೀರ್ ಅಹ್ಮದ್ ಖಾನ್ ವಿರುದ್ಧದ ವಾಗ್ದಾಳಿಯಿಂದ ತೀವ್ರ ಬೇಸರಗೊಂಡಿರುವ ಶಕೀಲ್ ನವಾಜ್ ಅವರು, ಇಂದು ಅಲ್ಪಸಂಖ್ಯಾತ ಘಟಕದ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ, ದೇವೇಗೌಡರಿಗೆ ಪತ್ರ ಬರೆದಿದ್ದಾರೆ.