ಕರ್ನಾಟಕ

‘ಇನ್ವೆಸ್ಟ್‌ ಕರ್ನಾಟಕ– 2016’ಕ್ಕೆ ಚಾಲನೆ

Pinterest LinkedIn Tumblr

Invest-Arun-inಬೆಂಗಳೂರು: ಮೂರು ದಿನಗಳ ಜಾಗತಿಕ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್‌ ಕರ್ನಾಟಕ– 2016’ಕ್ಕೆ ಬುಧವಾರ ಚಾಲನೆ ದೊರೆತಿದೆ.

ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ದೀಪ ಬೆಳಗುವ ಮೂಲಕ ‘ಇನ್ವೆಸ್ಟ್‌ ಕರ್ನಾಟಕ– 2016’ಕ್ಕೆ ಚಾಲನೆ ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರು ಹಾಗೂ ದೇಶ ವಿದೇಶದ ಉದ್ಯಮಿಗಳು ಪಾಲ್ಗೊಂಡಿದ್ದಾರೆ.

ಕೇಂದ್ರ ಸಚಿವರಾದ ಅನಂತ ಕುಮಾರ್‌, ನಿತಿನ್‌ ಗಡ್ಕರಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಟಾಟಾ ಸಮೂಹದ ಅಧ್ಯಕ್ಷ ರತನ್‌ ಟಾಟಾ ಮತ್ತು ರಾಜ್ಯ ಬೃಹತ್‌ ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ ಇದ್ದಾರೆ

Write A Comment