ಕರ್ನಾಟಕ

ಐಪಿಎಸ್ ಅಧಿಕಾರಿಯ ಮೊಬೈಲ್ ಎಗರಿಸಿದ ಚಾಲಾಕಿ ಕಳ್ಳ

Pinterest LinkedIn Tumblr

kalliಬೆಂಗಳೂರು, ಫೆ.3-ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ವಾಯು ವಿಹಾರ ಮುಗಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದಾಗ, ಬೈಕ್‌ನಲ್ಲಿ ಹಿಂಬಾಲಿಸಿದ ದರೋಡೆಕೋರರು ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವ ಘಟನೆ ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಡಿಜಿಪಿ ರ್ಯಾಂ ಕ್‌ನ ಐಪಿಎಸ್ ಅಧಿಕಾರಿಯೊಬ್ಬರು ರಾತ್ರಿ 8.45ರಲ್ಲಿ ವಾಯು ವಿಹಾರ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಬೈಕ್‌ನಲ್ಲಿ ಹಿಂಬಾಲಿಸಿದ ದರೋಡೆಕೋರರು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.

ಈ ಸಂಬಂಧ ಐಪಿಎಸ್ ಅಧಿಕಾರಿ ಇಂದಿರಾನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.

Write A Comment