ಬೆಂಗಳೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಮೈಸೂರು -ಹುಣಸೂರು ರಸ್ತೆಯ ಹಿನಕಲ್ ನ ರೂಸ್ಟ್ ಹೋಟೆಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.ಮೃತಪಟ್ಟವರನ್ನು ಸಂದೀಪ್(21) ಮತ್ತು ಸಿದ್ದಾರ್ಥ(20) ಎಂದು ಗುರುತಿಸಲಾಗಿದೆ. ಇನ್ನು ಕಾರಿನಲ್ಲಿದ್ದ ಮತ್ತೋರ್ವ ಯುವಕ ಹರ್ಷ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶ್ವವಿದ್ಯಾಲಯದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.