ಕರ್ನಾಟಕ

ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪಾರ್ಸೆಲ್‌ ಕಟ್ಟಡ ಕುಸಿತ: ಮೂವರಿಗೆ ಗಾಯ; ನಾಲ್ಕು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

Pinterest LinkedIn Tumblr

kattada-Hubliಹುಬ್ಬಳ್ಳಿ: ಇಲ್ಲಿನ ಕೇಂದ್ರ ರೈಲ್ವೆ ನಿಲ್ದಾಣದ ಪಾರ್ಸೆಲ್‌ ವಿಭಾಗದ ಕಟ್ಟಡ ಸೋಮವಾರ ಕುಸಿದು ಮೂರು ಮಂದಿ ಗಾಯಗೊಂಡಿದ್ದಾರೆ. ಕಟ್ಟಡದೊಳಗೆ ಇನ್ನೂ ನಾಲ್ಕು ಮಂದಿ ಸಿಲುಕಿರುವ ಶಂಕೆ ಇದೆ.

ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದಲ್ಲಿ ಸಿಲುಕಿರುವವರ ಪೈಕಿ ಮಹಿಳೆ ಮತ್ತು ಒಂದು ಮಗು ಕೂಡ ಸೇರಿದೆ ಎನ್ನಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ನಾಲ್ಕು ಜೆಸಿಬಿ ಯಂತ್ರಗಳೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಎರಡು ಮಹಡಿಯ ಈ ಕಟ್ಟಡದಲ್ಲಿ ಪೊಲೀಸ್‌ ಠಾಣೆ ಹಾಗೂ ಪಾರ್ಸೆಲ್‌ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದವು. ಕಟ್ಟಡ ಹಳೆಯದಾಗಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ.

Write A Comment