ಕರ್ನಾಟಕ

ಬೆಂಗಳೂರಿನ ಮೈಸೂರು ರಸ್ತೆ ಫ್ಲೈ ಓವರ್ ಮೇಲೆ ಭೀಕರ ಅಪಘಾತ: ವಿದ್ಯಾರ್ಥಿ ಸಾವು

Pinterest LinkedIn Tumblr

vinodh_accident

ಬೆಂಗಳೂರು: ನಗರದ ಮೈಸೂರು ರಸ್ತೆ ಫ್ಲೈ ಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಫ್ಲೈ ಓವರ್ ಮೇಲೆ ಗೂಡ್ಸ್ ಲಾರಿ ಹೋಂಡ ಆ್ಯಕ್ಟೀವಾಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಿಇಎಸ್ ಕಾಲೇಜಿನ ಎಂಬಿಎ ವಿನೋದ್ ನಾಗಪ್ಪ ಮೃತಪಟ್ಟ ದುರ್ದೈವಿ. ವಿನೋದ ನಾಗಪ್ಪ ಬೆಂಗಳೂರಿನ ದೊಮ್ಮಲೂರು ನಿವಾಸಿ. ಘಟನಾ ಸ್ಥಳಕ್ಕೆ ಆಗಮಿಸಿರುವ ಕೆ ಆರ್ ಮಾರ್ಕೆಟ್ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Write A Comment